ವಿಧಾನ ಪರಿಷತ್ ಸಭಾಪತಿ ಶಂಕರ ಮೂರ್ತಿ ಬದಲಾವಣೆಗೆ ಕಾಂಗ್ರೆಸ್ - ಜೆಡಿಎಸ್ ಸರ್ಕಸ್ ?

ಬೆಂಗಳೂರು, ಮಾ.26: ವಿಧಾನ ಪರಿಷತ್ ಸಭಾಪತಿ ಡಿಎಚ್ ಶಂಕರ ಮೂರ್ತಿ ಅವರನ್ನು ಕೆಳಗಿಳಿಸಲು ಆಡಳಿತಾರೂಢ ಕಾಂಗ್ರೆಸ್ ಮುಂದಾಗಿದ್ದು, ಕಾಂಗ್ರೆಸ್ ಮಂಡಿಸಲಿರುವ ಅವಿಶ್ವಾಸ ಗೊತ್ತುವಳಿಗೆ ಜೆಡಿಎಸ್ ಬೆಂಬಲ ನೀಡಲಿದೆ.
ಡಿಎಚ್ ಶಂಕರ ಮೂರ್ತಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಅವಿಶ್ವಾಸ ಗೊತ್ತುವಳಿ ಮಂಡಿಸಲಿದ್ದು, ಜೆಡಿಎಸ್ ಅವಿಶ್ವಾಸ ಗೊತ್ತುವಳಿಗೆ ಬೆಂಬಲ ನೀಡಲಿದೆ ಎಂದು ತಿಳಿದು ಬಂದಿದೆ.
ಉಪ ಚುನಾವಣೆಯ ಬಳಿಕ ಈ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಕಾಂಗ್ರೆಸ್ ಶಂಕರ ಮೂರ್ತಿಯನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಮಂಡಿಸಲಿರುವ ಅವಿಶ್ವಾಸ ಗೊತ್ತುವಳಿಗೆ ಬೆಂಬಲ ನೀಡಲು ಜೆಡಿಎಸ್ ತಾತ್ವಿಕವಾಗಿ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ್ ಅವರು ಈ ಸಂಬಂಧ ಮಾತುಕತೆ ನಡೆಸಿದ್ದಾರೆ.
ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕಾಂಗ್ರೆಸ್ ನ ಪ್ರಯತ್ನಕ್ಕೆ ಜೆಡಿಎಸ್ ಬೆಂಬಲ ನೀಡಲಿದೆ. ಡಿಎಚ್ ಶಂಕರಮೂರ್ತಿ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲಿರುವ ಕಾಂಗ್ರೆಸ್ ಗೆ ಬೆಂಬಲ ನೀಡುವ ಬಗ್ಗೆ ಜೆಡಿಎಸ್ ನ ವರಿಷ್ಠರಾದ ಎಚ್.ಡಿ.ದೇವೇಗೌಡ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಶರವಣ್ ತಿಳಿಸಿದ್ದಾರೆ.





