Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಕೆರೆ ಬೀಚ್ ಅಭಿವೃದ್ಧಿಗೆ ನೀಲನಕಾಶೆ

ಪಡುಕೆರೆ ಬೀಚ್ ಅಭಿವೃದ್ಧಿಗೆ ನೀಲನಕಾಶೆ

ಮೂಲಭೂತ ಸೌಕರ್ಯ, ರಸ್ತೆ ನಿರ್ಮಾಣಕ್ಕೆ ಯೋಜನೆ: ಪ್ರಮೋದ್

ವಾರ್ತಾಭಾರತಿವಾರ್ತಾಭಾರತಿ26 March 2017 8:12 PM IST
share
ಪಡುಕೆರೆ ಬೀಚ್ ಅಭಿವೃದ್ಧಿಗೆ ನೀಲನಕಾಶೆ

ಉಡುಪಿ, ಮಾ.26: ಬಹುಕಾಲದ ಬೇಡಿಕೆಯಾದ ಮಲ್ಪೆ-ಪಡುಕೆರೆ ಸೇತುವೆ 17 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡು ಸಂಚಾರಕ್ಕೆ ಮುಕ್ತಗೊಂಡ ಬೆನ್ನಲ್ಲೇ, ಈವರೆಗೆ ಹೊರಜಗತ್ತಿಗೆ ಕಣ್ಣಿಗೆ ಬೀಳದೇ ಮರೆಯಾಗಿದ್ದ ಪಡುಕೆರೆಯ ಶುಭ್ರ ಹಾಗೂ ರಮಣೀಯ ಸೌಂದರ್ಯದ ಬೀಚ್ ಪ್ರವಾಸಿಗರನ್ನು ಆಕರ್ಷಿಸಲು ಸಜ್ಜುಗೊಳ್ಳುತ್ತಿದೆ.

ಪಡುಕೆರೆ ಎಂಬ ದ್ವೀಪದಂತಿದ್ದ ಅಜ್ಞಾತ ಪುಟ್ಟ ಊರನ್ನು ಭಾರತದ ಪ್ರವಾಸೋದ್ಯಮ ಭೂಪಟದಲ್ಲಿ ಸೇರಿಸಲು ಉತ್ಸುಕವಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಇಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ, ನಗರಸಭೆ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳೊಂದಿಗೆ ಪಡುಕೆರೆಗೆ ಭೇಟಿ ನೀಡಿ ಈ ಊರನ್ನು ಮಲ್ಪೆಯೊಂದಿಗೆ ಪ್ರವಾಸೋದ್ಯಮ ತಾಣವಾಗಿ ಗುರುತಿಸುವ ಬಗ್ಗೆ ಕೈಗೊಳ್ಳಬೇಕಾದ ಕ್ರಮದ ಕುರಿತು ವಿವರವಾಗಿ ಚರ್ಚಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್, ವಾಣಿಜ್ಯೀಕರಣ ಗೊಳಿಸದೇ ಪಡುಕೆರೆಯಲ್ಲಿ ಪ್ರವಾಸಿಗರಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಈ ಸಹಜ ಸೌಂದರ್ಯದ ಬೀಚ್‌ನ್ನು ವಿಶ್ವ ಪ್ರಸಿದ್ದ ಬೀಚ್ ಅಗಿ ಆಭಿವೃದ್ದಿಗೊಳಿಸಲು ಬೇಕಾದ ಯೋಜನೆಯನ್ನು ರೂಪಿಸಲಾ ಗುವುದು ಎಂದರು.

ಮಲ್ಪೆ- ಪಡುಕರೆ ಸೇತುವೆಯ ಉದ್ಘಾಟನೆಯೊಂದಿಗೆ ಇದೀಗ ಪಡುಕೆರೆಗೆ ಸುಲಭದಲ್ಲಿ ನೇರ ಸಂಪರ್ಕ ಸಾಧ್ಯವಾಗಿದ್ದು, ಪಡುಕೆರೆ ಬೀಚ್‌ನ್ನು ಮಲ್ಪೆ ಬೀಚ್ ಅಭಿವೃದಿ ಸಮಿತಿಯ ಸುಪರ್ದಿಗೆ ಒಪ್ಪಿಸಿ, ವ್ಯವಸ್ಥಿತ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದರು. ಸಮಿತಿಯು ಬೀಚ್ ಕ್ಲೀನಿಂಗ್ ಯಂತ್ರವನ್ನು ಹೊಂದಿರುವುದರಿಂದ ಬೀಚ್‌ನ ಸ್ವಚ್ಛತೆ ಉಳಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.

ಇಲ್ಲಿ ಬೀಚ್‌ಗೆ ಸಮಾನಾಂತರವಾಗಿ ರಸ್ತೆಯನ್ನು ನಿರ್ಮಿಸಲಾಗುವುದು. ಆದರೆ ಇದರಿಂದ ಸ್ಥಳೀಯರಿಗೆ ಯಾವುದೇ ರೀತಿಯ ಅನಾನುಕೂಲತೆ, ತೊಂದರೆ ಆಗದಂತೆ ಎಚ್ಚರಿಕೆ ವಹಿಸಲಾಗುವುದು. ಬೀಚ್‌ನಲ್ಲಿ ವಾಹನ ಪಾರ್ಕಿಂಗ್‌ಗೆ ವ್ಯವಸ್ಥೆ, ಶೌಚಾಲಯಗಳ ನಿರ್ಮಾಣ, ಸ್ನಾನಗೃಹಗಳ ನಿರ್ಮಾಣ, ವಿಶ್ರಾಂತಿಧಾಮ ಹಾಗೂ ಉಪಹಾರಗೃಹಗಳನ್ನು ನಿರ್ಮಿಸಿ ಪ್ರವಾಸೋದ್ಯಮದ ಬೆಳವಣಿಗೆಗೆ ಬೇಕಾದ ಅವಕಾಶಗಳನ್ನು ಕಲ್ಪಿಸಲಾಗುವುದು ಎಂದರು.

ಅಲ್ಲದೇ ಪಡುಕೆರೆಯಲ್ಲಿ ಪ್ರವಾಸಿಗರಿಗಾಗಿ ಹೋಮ್‌ಸ್ಟೇಗಳನ್ನು ಆರಂಭಿಸುವ ಉದ್ದೇಶವಿದ್ದು, ಇದಕ್ಕಾಗಿ ಸ್ಥಳೀಯರ ನೆರವನ್ನು ಪಡೆಯಲಾಗುವುದು. ಸ್ಥಳೀಯರು ತಮ್ಮ ಮನೆಯಲ್ಲೇ ಈ ವ್ಯವಸ್ಥೆಯನ್ನು ಆರಂಭಿಸಲು ಬೇಕಾದ ನೆರವು, ಪ್ರೋತ್ಸಾಹ ನೀಡಲಾಗುವುದು. ಸ್ಥಳೀಯರ ಮೂಲಕ ಸೀಪುಡ್ ವೈವಿಧ್ಯತೆಯನ್ನು ಪ್ರವಾಸಿಗರಿಗೆ ಪರಿಚಯಿಸಲು ಅವಕಾಶವಿದೆ. ಒಟ್ಟಿನಲ್ಲಿ ರಾಜ್ಯದ 3 ಕರಾವಳಿ ಜಿಲ್ಲೆಗಳಿಗೆ ಮಾದರಿಯಾದ ಹೋಮ್‌ಸ್ಟೇ ವ್ಯವಸ್ಥೆಯನ್ನು ಇಲ್ಲಿ ಅನುಷ್ಠಾನಕ್ಕೆ ಪ್ರಯತ್ನಿಸಲಾಗುವುದು.ಇದರಿಂದ ಸ್ಥಳೀಯರಿಗೆ ಉತ್ತಮ ಆದಾಯ ಗಳಿಸುವ ಅವಕಾಶವಿದೆ ಎಂದು ಪ್ರಮೋದ್ ನುಡಿದರು.

ಇನ್ನು ರಸ್ತೆ ಅಭಿವೃದ್ಧಿಗೆ 1.20 ಕೋಟಿ ರೂ.ಗಳ ಪ್ರಸ್ತಾಪವನ್ನು ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಕಳುಹಿಸಲಾಗುವುದು. ಮಲ್ಪೆ ಅಭಿವೃದ್ಧಿ ಸಮಿತಿ ಇರುವ ಒಂದು ಕೋಟಿ ರೂ.ವನ್ನು ಇದಕ್ಕೆ ಬಳಸಲಾಗುವುದು. ನಮ್ಮ ಪ್ರಯತ್ನಕ್ಕೆ ಸ್ಥಳೀಯರು ಕೈಜೋಡಿಸಬೇಕೆಂದು ಕೋರಿದ ಸಚಿವರು, ಪಡುಕೆರೆ ಸ್ಥಳೀಯರ ಅಭಿವೃದ್ಧಿಗೆ ಪೂರಕವಾಗಿ ಎಲ್ಲವನ್ನೂ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಚಿವರೊಂದಿಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ನಗರಸಭಾ ಸದಸ್ಯರಾದ ಜನಾರ್ಧನ ಭಂಡಾರ್‌ಕರ್, ರಮೇಶ್ ಕಾಂಚನ್, ತಹಶೀಲ್ದಾರ್ ಮಹೇಶ್ಚಂದ್ರ, ಪೌರಾಯುಕ್ತ ಡಿ.ಮಂಜುನಾಥಯ್ಯ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಅನಿತಾ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X