Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೀಟರ್ ಬಡ್ಡಿ ದಂಧೆಕೋರರ ವಿರುದ್ಧ ಪೊಲೀಸ್...

ಮೀಟರ್ ಬಡ್ಡಿ ದಂಧೆಕೋರರ ವಿರುದ್ಧ ಪೊಲೀಸ್ ಇಲಾಖೆ ಸಮರ !

17 ಕಡೆ ಏಕಕಾಲಕ್ಕೆ ದಾಳಿ, ಏಳು ಜನರ ಬಂಧನ

ವಾರ್ತಾಭಾರತಿವಾರ್ತಾಭಾರತಿ26 March 2017 10:55 PM IST
share
ಮೀಟರ್ ಬಡ್ಡಿ ದಂಧೆಕೋರರ ವಿರುದ್ಧ ಪೊಲೀಸ್ ಇಲಾಖೆ ಸಮರ !

ಶಿವಮೊಗ್ಗ, ಮಾ. 26: ಕಳೆದ ವರ್ಷ ಶಿವಮೊಗ್ಗ ನಗರದ ಮೀಟರ್ ಬಡ್ಡಿ ದಂಧೆಕೋರರ ವಿರುದ್ಧ ಪೊಲೀಸ್ ಇಲಾಖೆ ಸಮರ ಸಾರಿ,ದಂಧೆಕೋರರ ನಿದ್ದೆಗೆಡುವಂತೆ ಮಾಡಿತ್ತು. ಇದೀಗ ಭದ್ರಾವತಿ ಪಟ್ಟಣದತ್ತ ಚಿತ್ತ ಹರಿಸಿರುವ ಪೊಲೀಸ್ ಇಲಾಖೆಯು, ನಾಗರಿಕರ ಪಾಲಿಗೆ ಕಂಟಕಪ್ರಾಯವಾಗಿ ಪರಿಣಮಿಸಿದ್ದ ಮೀಟರ್‌ಬಡ್ಡಿ ದಂಧೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.

 ಶನಿವಾರ ಸಂಜೆ ಭದ್ರಾವತಿ ಪಟ್ಟಣ ಹಾಗೂ ಹೊರವಲಯಗಳಲ್ಲಿ ಕಾನೂನುಬಾಹಿರವಾಗಿ ಬಡ್ಡಿ ದಂಧೆ ನಡೆಸುತ್ತಿದ್ದವರ ಮನೆಗಳ ಮೇಲೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಕೆಲವೇ ಗಂಟೆಗಳಲ್ಲಿ, ಪ್ರತ್ಯೇಕ ತಂಡಗಳಲ್ಲಿ 17 ಕಡೆ ದಾಳಿ ನಡೆಸಿರುವ ಪೊಲೀಸರು ಮೀಟರ್ ಬಡ್ಡಿ ದಂಧೆಯಲ್ಲಿ ತೊಡಗಿದ್ದ ಆರೋಪದ ಮೇರೆಗೆ ಏಳು ಜನರನ್ನು ಬಂಧಿಸಿದ್ದಾರೆ.

 ಶೇಖರಪ್ಪ, ಉಗ್ರಯ್ಯ, ಚಂದ್ರಮ್ಮ, ಶ್ರೀನಿವಾಸ್, ಪ್ರಕಾಶ್, ಅಜಯ್ ಹಾಗೂ ಅಶೋಕ್ ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇವರ ವಿರುದ್ಧ, ಮಿತಿಮೀರಿದ ಬಡ್ಡಿ ವಿಧಿಸುವಿಕೆ ಅಧಿನಿಯಮ 2004, ಲೇವಾದೇವಿ ವ್ಯವಹಾರ ಕಾಯ್ದೆ, ಐಪಿಸಿ ಕಲಂ 420ರ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ 2, ಹಳೇನಗರ ಹಾಗೂ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ತಲಾ ಒಂದು ಎಫ್‌ಐಆರ್ ದಾಖಲಾಗಿದೆ.
ವಶಕ್ಕೆ : ಬಂಧಿತ ಆರೋಪಿಗಳಿಂದ 63 ಚೆಕ್‌ಗಳು, 61 ಪ್ರೊನೋಟ್, 174 ವಾಹನಗಳ ದಾಖಲೆ, 10 ಜಮೀನುಗಳ ದಾಖಲಾತಿ, 29 ಬೈಕ್ ಕೀಗಳು, 32 ಎಟಿಎಂ ಹಾಗೂ ಬ್ಯಾಂಕ್‌ಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಪೊಲೀಸ್ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಮಾರ್ಗದರ್ಶನದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್, ಭದ್ರಾವತಿ ಡಿವೈಎಸ್ಪಿ ಟಿ.ಜೆ.ಉದೇಶ್, ಡಿಸಿಬಿ ಇನ್‌ಸ್ಪೆೆಕ್ಟರ್ ಕುಮಾರ್, ಭದ್ರಾವತಿಯ ಇನ್‌ಸ್ಪೆಕ್ಟರ್‌ರಗಳಾದ ರುದ್ರೇಶ್, ವರದರಾಜ್ ಮತ್ತವರ ಸಿಬ್ಬಂದಿ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.
ಸಂಚಲ   : ಇತ್ತೀಚಿನ ವರ್ಷಗಳಲ್ಲಿ ಭದ್ರಾವತಿ ಪಟ್ಟಣದಲ್ಲಿ ಮೀಟರ್ ಬಡ್ಡಿ ದಂಧೆಕೋರರ ವಿರುದ್ಧ್ದ ಪೊಲೀಸ್ ಇಲಾಖೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಿರಲಿಲ್ಲ. ಪೊಲೀಸರು ಪಟ್ಟಣದ ವಿವಿಧ ದಾಳಿಯಲ್ಲಿ ಭಾಗಿಯಾಗಿದ್ದ ವಿಷಯ ಅರಿತ ಹಲವು ದಂಧೆಕೋರರು ಮನೆಗಳಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ದಾಳಿಯು ಪಟ್ಟಣದಾದ್ಯಂತ ನಾಗರಿಕರ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ಪೊಲೀಸ್ ಇಲಾಖೆಯ ನಿರ್ದಾಕ್ಷಿಣ್ಯ ಕ್ರಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಭದ್ರಾವತಿ ಪಟ್ಟಣದಲ್ಲಿ ಮೀಟರ್ ಬಡ್ಡಿ ದಂಧೆಕೋರರು ಭಾರೀ ಸಂಖ್ಯೆಯಲ್ಲಿದ್ದಾರೆ. ಕಳೆದ ಹಲವು ವರ್ಷಗಳಿಂದ ನಿರಾತಂಕವಾಗಿ ತಮ್ಮ ದಂಧೆ ನಡೆಸಿಕೊಂಡು ಬರುತ್ತಿದ್ದಾರೆ. ಇವರಿಂದ ಸಾಲ ಪಡೆದ ಅದೆಷ್ಟ್ಟೋ ಜನರು ದುಬಾರಿ ಬಡ್ಡಿಯ ಕಾರಣದಿಂದ ಪಡೆದ ಹಣ ಹಿಂದಿರುಗಿಸಲು ಸಾಧ್ಯವಾಗದೆ ತಮ್ಮ ಬಳಿಯಿದ್ದ ಚರ-ಸ್ಥಿರಾಸ್ತಿಗಳನ್ನು ಕಳೆದುಕೊಂಡಿದ್ದಾರೆ. ನಾನಾ ರೀತಿಯ ಹಿಂಸೆಗೆ ತುತ್ತಾಗಿದ್ದಾರೆ.

 ಇದೀಗ ಪೊಲೀಸ್ ಇಲಾಖೆಯು ಈ ದಂಧೆಕೋರರ ವಿರುದ್ದ ಕಠಿಣ ಕ್ರಮ ಜರಗಿಸಲು ಮುಂದಾಗಿರುವುದು ನಿಜಕ್ಕೂ ಅಭಿನಂದನೀಯವಾಗಿದೆ. ಇದರಿಂದ ಹಲವು ಕುಟುಂಬಗಳು ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗುವಂತಾಗಿದೆ. ಪೊಲೀಸರು ನಿರಂತರವಾಗಿ ಈ ರೀತಿಯ ಕಾರ್ಯಾಚರಣೆ ನಡೆಸಬೇಕು ಎಂದು ಹೆಸರು ಬಹಿರಂಗಪಡಿಸಲಿಚ್ಚಿಸದ ಭದ್ರಾವತಿ ಪಟ್ಟಣದ ಹೊಸಮನೆ ಬಡಾವಣೆಯ ವ್ಯಾಪಾರಿಯೋರ್ವರು ಹೇಳುತ್ತಾರೆ.

ದಂಧೆಕೋರರಲ್ಲಿ ಶುರುವಾಗಿದೆ ನಡುಕ:

ಭದ್ರಾವತಿ ಪಟ್ಟಣದಲ್ಲಿ ಮೀಟರ್ ಬಡ್ಡಿ ದಂಧೆಕೋರರ ವಿರುದ್ಧ ಪೊಲೀಸ್ ಇಲಾಖೆ ಕಾರ್ಯಾಚರಣೆಗಿಳಿದು ಹಲವರನ್ನು ಬಂಧಿಸುತ್ತಿದ್ದಂತೆ, ದಂಧೆಯಲ್ಲಿ ತೊಡಗಿದ್ದವರಲ್ಲಿ ನಡುಕ ಶುರುವಾಗಿದೆ. ಬಂಧನದ ಭೀತಿಯ ಹಿನ್ನೆಲೆಯಲ್ಲಿ, ಈಗಾಗಲೇ ಹಲವು ದಂಧೆಕೋರರು ಪಟ್ಟಣ ತೊರೆದು ತಲೆಮರೆಸಿಕೊಳ್ಳಲಾರಂಭಿಸಿದ್ದಾರೆ. ಮತ್ತೊಂದೆಡೆ ಪೊಲೀಸರು ಕೂಡ ದಂಧೆಕೋರರ ಹೆಡೆಮುರಿಕಟ್ಟಲು ಕಾರ್ಯಾಚರಣೆ ಮುಂದುವರಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇಷ್ಟು ದಿನ ದಂಧೆಕೋರರ ವಿರುದ್ದ ದೂರು ನೀಡಲು ಭಯಬೀಳುತ್ತಿದ್ದ ನಾಗರಿಕರು ಇದೀಗ ಪೊಲೀಸ್ ಠಾಣೆಗಳಿಗೆ ಆಗಮಿಸಿ ದಂಧೆಕೋರರ ವಿರುದ್ಧ ಮಾಹಿತಿ ನೀಡಲಾರಂಭಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X