ಪಣಂಬೂರು: ರಸ್ತೆ ಅಪಘಾತಕ್ಕೆ ಯುವಕ ಬಲಿ, ಮೂವರಿಗೆ ಗಾಯ

ಮಂಗಳೂರು, ಮಾ.27: ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿಚರಂಡಿಗೆ ಉರುಳಿದ ಪರಿಣಾಮ ಓರ್ವ ಮೃತಪಟ್ಟ ಘಟನೆ ನಿನ್ನೆ ತಡರಾತ್ರಿ ಪಣಂಬೂರಿನಲ್ಲಿ ನಡೆದಿದೆ.
ಮೃತರನ್ನು ಮನ್ ದೀಪ್ ಸಿಂಗ್(25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪಿಕಪ್ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಗಂಭೀರ ಗಾಯಗೊಂಡಿದ್ದ ಮನ್ ದೀಪ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾವ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪಿಕಪ್ ಪಣಂಬೂರಿನಿಂದ ಕೊಟ್ಟಾರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Next Story





