Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖಾಸಗಿ ಪ್ರಕಾಶಕರ ಪಠ್ಯಪುಸ್ತಕದ ಗುಣಮಟ್ಟದ...

ಖಾಸಗಿ ಪ್ರಕಾಶಕರ ಪಠ್ಯಪುಸ್ತಕದ ಗುಣಮಟ್ಟದ ಖಾತರಿಗೆ ವ್ಯವಸ್ಥೆಯಿಲ್ಲ: ಸರಕಾರದ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ27 March 2017 12:48 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಖಾಸಗಿ ಪ್ರಕಾಶಕರ ಪಠ್ಯಪುಸ್ತಕದ ಗುಣಮಟ್ಟದ ಖಾತರಿಗೆ ವ್ಯವಸ್ಥೆಯಿಲ್ಲ: ಸರಕಾರದ ಹೇಳಿಕೆ

ಹೊಸದಿಲ್ಲಿ, ಮಾ.27: ಖಾಸಗಿ ಪುಸ್ತಕ ಪ್ರಕಾಶಕರು ಸಿದ್ದಪಡಿಸುವ ಪಠ್ಯಪುಸ್ತಕದ ಗುಣಮಟ್ಟವನ್ನು ಖಾತರಿಪಡಿಸಿಕೊಳ್ಳುವ ಯಾವುದೇ ವ್ಯವಸ್ಥೆ ಇರುವುದಿಲ್ಲ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್‌ಇ)ಗೆ ಸಂಯೋಜನೆಗೊಂಡಿರುವ ಶಾಲೆಗಳಲ್ಲಿ ಬೋಧಿಸಲಾಗುವ ಪಠ್ಯಪುಸ್ತಕ ಯಾವ ರೀತಿ ಇರಬೇಕು ಅಥವಾ ಅದರಲ್ಲಿ ಇರಬೇಕಾದ ವಿಷಯಗಳು ಯಾವುವು ಎಂಬುದನ್ನು ಸೂಚಿಸಲು ಅಥವಾ ಶಿಫಾರಸು ಮಾಡುವ ಅಧಿಕಾರವನ್ನು ಸಿಬಿಎಸ್‌ಇ ಹೊಂದಿಲ್ಲ ಎಂದು ಲೋಕಸಭೆಯಲ್ಲಿ ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಮಾನವ ಸಂಪನ್ಮೂಲ ಸಚಿವಾಲಯದ ಸಹಾಯಕ ಸಚಿವ ಉಪೇಂದ್ರ ಕುಶ್ವಾಲಾ ತಿಳಿಸಿದರು.

ಸಿಬಿಎಸ್‌ಇ ಶಾಲೆಗಳಲ್ಲಿ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಅಳವಡಿಸುವ ಬಗ್ಗೆ ಸರಕಾರ ದೃಢನಿರ್ಧಾರ ಮಾಡಿದೆ ಎಂದವರು ಇದೇ ಸಂದರ್ಭ ತಿಳಿಸಿದರು.

  ಶಾಲೆಗಳಲ್ಲಿ ಮಕ್ಕಳಿಗೆ ಬೋಧಿಸಲಾಗುವ ಪಠ್ಯಪುಸ್ತಕದ ವಿಷಯಗಳ ಬಗ್ಗೆ ಸೂಕ್ಷ್ಮ ಪರಿಶೀಲನೆಯ ಕೊರತೆಯ ಕುರಿತು ಶಿಕ್ಷಣ ತಜ್ಞರು ಕಳವಳ ವ್ಯಕ್ತಪಡಿಸಿರುವುದನ್ನು ಇಲ್ಲಿ ಉ್ಲಲೇಖಿಸಬಹುದು.

 ನಾಲ್ಕನೇ ತರಗತಿಯ ಪರಿಸರ ವಿಜ್ಞಾನ ಪಠ್ಯಪುಸ್ತಕದಲ್ಲಿ ಒಂದೆಡೆ , ಪ್ರಯೋಗದ ಭಾಗವಾಗಿ ಬೆಕ್ಕಿನಮರಿಯನ್ನು ಕೊಲ್ಲಲು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದ್ದು ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರಿಂದ ಎಚ್ಚೆತ್ತ ಪುಸ್ತಕ ಪ್ರಕಾಶಕರು ಈ ಪುಸ್ತಕವನ್ನು ಕಳೆದ ತಿಂಗಳು ಮಾರುಕಟ್ಟೆಯಿಂದ ಹಿಂಪಡೆದಿದ್ದರು. ಇನ್ನೊಂದು ಪ್ರಕರಣದಲ್ಲಿ, 12ನೆ ತರಗತಿಯ ಸೋಷಿಯಾಲಜಿ ಪುಸ್ತಕದಲ್ಲಿ ಮಹಿಳೆ ಕುರೂಪಿಯಾಗಿದ್ದರೆ ವರದಕ್ಷಿಣೆಗೆ ಬೇಡಿಕೆ ಹೆಚ್ಚುತ್ತದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ, ಖಾಸಗಿ ಪ್ರಕಾಶಕರು ಸಿದ್ದಪಡಿಸುವ ಪಠ್ಯಪುಸ್ತಕಗಳನ್ನು ಸೂಕ್ಷ್ಮವಾಗಿ ಪರಿಶೀಲಿಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X