Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈಶಾನ್ಯದ ರಾಜ್ಯಗಳಲ್ಲಿ ಬೀಫ್...

ಈಶಾನ್ಯದ ರಾಜ್ಯಗಳಲ್ಲಿ ಬೀಫ್ ನಿಷೇಧವಿಲ್ಲ: ಬಿಜೆಪಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ27 March 2017 8:23 PM IST
share
ಈಶಾನ್ಯದ ರಾಜ್ಯಗಳಲ್ಲಿ ಬೀಫ್ ನಿಷೇಧವಿಲ್ಲ: ಬಿಜೆಪಿ ಸ್ಪಷ್ಟನೆ

ಹೊಸದಿಲ್ಲಿ,ಮಾ.27: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರಕಾರವು ಗೋಹತ್ಯೆಗೆ ನಿಷೇಧಕ್ಕೆ ಮುಂದಾಗಿದೆಯಾದರೂ, ಮುಂದಿನ ವರ್ಷ ವಿಧಾನಸಭಾ ಚುನಾವಣೆಗೆ ತೆರಳಲಿರುವ ಈಶಾನ್ಯ ಭಾರತದ ಮೂರು ರಾಜ್ಯಗಳಲ್ಲಿ ಗೋಹತ್ಯೆ ನಿಷೇಧಿಸುವ ಕಾನೂನನ್ನು ಜಾರಿಗೊಳಿಸುವ ಇಚ್ಛೆಯನ್ನು ತಾನು ಹೊಂದಿಲ್ಲವೆಂದು ಬಿಜೆಪಿ ಸ್ಪಷ್ಟಪಡಿಸಿದೆ. ಕ್ರೈಸ್ತರು ಬಹುಸಂಖ್ಯಾತರಾಗಿರುವ ರಾಜ್ಯಗಳಾದ ಮೇಘಾಲಯ, ಮಿರೆರಾಮ್ ಹಾಗೂ ನಾಗಾಲ್ಯಾಂಡ್‌ನಲ್ಲಿ ಗೋಮಾಂಸವನ್ನು ವ್ಯಾಪಕವಾಗಿ ಸೇವಿಸಲಾಗುತ್ತಿದೆ. ಈ ಮೂರು ರಾಜ್ಯಗಳಲ್ಲಿಯೂ ಬೀಫ್ ನಿಷೇಧಿಸುವ ಇಚ್ಛೆಯನ್ನು ಕೇಂದ್ರ ಸರಕಾರ ಹೊಂದಿದೆಯೆಂಬ ಊಹಾಪೋಹಗಳನ್ನು ಬಿಜೆಪಿಯ ಮೇಘಾಲಯ ಘಟಕದ ಪ್ರಧಾನ ಕಾರ್ಯದರ್ಶಿ ಡೇವಿಡ್ ಖಾರ್ಸಟಿ ಅಲ್ಲಗಳೆದಿದ್ದು, ಕೆಲವು ಸ್ಥಾಪಿತ ಹಿತಾಸಕ್ತಿಗಳು ಇಂತಹ ವದಂತಿಗಳನ್ನು ಹರಡುತ್ತಿರುವುದಾಗಿ ಆಪಾದಿಸಿದರು.

ನಾಗಾಲ್ಯಾಂಡ್‌ನಲ್ಲಿಯೂ ಗೋಹತ್ಯೆ ನಿಷೇಧಿಸುವ ಉದ್ದೇಶ ತನಗಿಲ್ಲವೆಂದು ಬಿಜೆಪಿ ಸ್ಪಷ್ಚಪಡಿಸಿದೆ. ‘‘ಮುಂದಿನ ವರ್ಷದ ವಿಧಾನಸಭಾ ಚುನಾವಣೆಯ ಬಳಿಕ ನಮ್ಮ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಉತ್ತರಪ್ರದೇಶದಲ್ಲಿ ಆದಂತೆ ನಾಗಾಲ್ಯಾಂಡ್‌ನಲ್ಲಿಯೂ ಗೋಹತ್ಯೆಯನ್ನು ನಿಷೇಧಿಸಲಾಗುವುದಿಲ್ಲ. ಈ ರಾಜ್ಯದ ವಾಸ್ತವಿಕ ಪರಿಸ್ಥಿತಿ ವಿಭಿನ್ನವಾಗಿದ್ದು, ಅದನ್ನು ನಮ್ಮ ಕೇಂದ್ರ ನಾಯಕರು ಅರಿತಿದ್ದಾರೆ’’ ಎಂದು ನಾಗಾಲ್ಯಾಂಡ್‌ನ ಬಿಜೆಪಿ ಅಧ್ಯಕ್ಷ ವಿಸಾಲೊಲಿ ಲ್ಹೊಂಗು ತಿಳಿಸಿದ್ದಾರೆ.

       2011ರ ಜನಗಣತಿಯ ಪ್ರಕಾರ ನಾಗಾಲ್ಯಾಂಡ್ 20 ಲಕ್ಷ ಜನಸಂಖ್ಯೆಯಲ್ಲಿ ಶೇ. 88ರಷ್ಟು ಮಂದಿ ಕ್ರೈಸ್ತರು. ಹಾಗೆಯೇ ಮಿರೆರಾಂ ಹಾಗೂ ಮೇಘಾಲಯಗಳಲ್ಲಿಯೂ ಕ್ರೈಸ್ತರು, ಕ್ರಮವಾಗಿ ಒಟ್ಟು ಜನಸಂಖ್ಯೆಯ ಶೇ.87 ಹಾಗೂ ಶೇ.75ರಷ್ಟಿದ್ದಾರೆ. ಮೇಘಾಲಯ ಹಾಗೂ ಮಿರೆರಾಂಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ, ನಾಗಾಲ್ಯಾಂಡ್‌ನಲ್ಲಿ ನಾಗಾಪೀಪಲ್ಸ್ ಫ್ರಂಟ್ ನೇತೃತ್ವದ ಸರಕಾರದಲ್ಲಿ ಬಿಜೆಪಿ ಪಾಲುದಾರ ಪಕ್ಷವಾಗಿದೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ತನ್ನ ಸರಕಾರವನ್ನು ಸ್ಥಾಪಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ಈ ಯಶಸ್ಸನ್ನು ಈಶಾನ್ಯದ ಇತರ ಮೂರು ರಾಜ್ಯಗಳಲ್ಲಿ ಪುನರಾವರ್ತಿಸಲು ಅದು ಬಯಸಿದೆ.

 60 ಸದಸ್ಯ ಬಲದ ಮೇಘಾಲಯ ವಿಧಾನಸಭೆಗೆ 2013ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯು ಒಂದೇ ಒಂದು ಸ್ಥಾನ ಕೂಡಾ ಗೆಲ್ಲಲು ವಿಫಲವಾಗಿತ್ತು. ಐದು ವರ್ಷಗಳ ಹಿಂದೆ ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಎರಡು ಸ್ಥಾನಗಳನ್ನು ಗೆದ್ದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X