ಕಾಶ್ಮೀರದಲ್ಲಿ ಗುಂಡಿನ ಕಾಳಗ, ಓರ್ವ ಬಲಿ

ಶ್ರೀನಗರ,ಮಾ..28: ಜಮ್ಮು-ಕಾಶ್ಮೀರದ ಬಡಗಾಂವ್ ಜಿಲ್ಲೆಯ ಚಾದೂರಾ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಆರಂಭಗೊಂಡಿದ್ದು, ಓರ್ವ ಸ್ಥಳೀಯ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇತರ ನಾಲ್ವರು ಗಾಯಗೊಂಡಿದ್ದಾರೆ.
ಭಯೋತ್ಪಾದಕರು ಬಚ್ಚಿಟ್ಟುಕೊಂಡಿರುವ ಮಾಹಿತಿ ಪಡೆದಿದ್ದ ಭದ್ರತಾ ಸಿಬ್ಬಂದಿಗಳು ಬೆಳ್ಳಂಬೆಳಿಗ್ಗೆ ಚಾದೂರಾದ ದರ್ಬಾಗ್ ಪ್ರದೇಶವನ್ನು ನಿರ್ಬಂಧಿಸಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದರು. ಈ ವೇಳೆ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದು ಗುಂಡಿನ ಕಾಳಗಕ್ಕೆ ನಾಂದಿ ಹಾಡಿತ್ತು. ಈ ಸಂದರ್ಭ ಅಲ್ಲಿ ನೆರೆದಿದ್ದ ಸ್ಥಳೀಯ ಪ್ರತಿಭಟನಾಕಾರರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ದಲ್ಲಿ ತೊಡಗಿದ್ದರು. ಭದ್ರತಾ ಪಡೆಗಳು ತಮ್ಮ ರಕ್ಷಣೆಗಾಗಿ ಪ್ರತಿದಾಳಿ ನಡೆಸಿದಾಗ ಓರ್ವ ಪ್ರತಿಭಟನಾಕಾರ ಗುಂಡೇಟಿಗೆ ಬಲಿಯಾಗಿದ್ದಾನೆ. ಇತರ ನಾಲ್ವರು ಗಾಯ ಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು.
Next Story