ಮಾ.30ರಿಂದ ಎಸೆಸೆಲ್ಸಿ ಪರೀಕ್ಷೆ

ಬೆಂಗಳೂರು, ಫೆ.28: 2017ನೆ ಸಾಲಿನ ಎಸೆಸೆಲ್ಸಿ ಪರೀಕ್ಷೆಯು ಮಾ.30ರಿಂದ ಎ.12ರವರೆಗೆ ನಡೆಯಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಪರೀಕ್ಷಾ ಕೊಠಡಿಗೆ ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವುದಿಲ್ಲ. ಬೆಳಿಗ್ಗೆ 9.30 ಗಂಟೆಯೊಳಗೆ ಪ್ರವೇಶಿಸಬೇಕೆಂದು ಈಗಾಗಲೇ ತಿಳಿಸಲಾಗಿದೆ. ಮೊದಲ ಬೆಲ್ ಬಾರಿಸುವ ಬೆಳಗ್ಗೆ 9.15 ರಿಂದ ಅಂತಿಮ ಬೆಲ್ ಬಾರಿಸುವ 9.30 ರೊಳಗೆ ಕೊಠಡಿಯಲ್ಲಿ ಹಾಜರಿರಬೇಕೆಂದು ಸೂಚನೆ ನೀಡಲಾಗಿದೆ.
ಮಾ.29ರಂದು ಯುಗಾದಿ ಹಬ್ಬ ಇರುವುದರಿಂದ ಇಂದೇ ಪರೀಕ್ಷಾ ಉಸ್ತುವಾರಿ ವಹಿಸಿದ್ದ ಶಿಕ್ಷಕರು ಮತ್ತು ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಿ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಯನ್ನು ಬರೆಯುವ ಕಾರ್ಯದಲ್ಲಿ ನಿರತರಾಗಿದ್ದರು. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಮಂಡಳಿ ನಿರ್ದೇಶಕಿ ಯಶೋಧ ಬೋಪಣ್ಣ ತಿಳಿಸಿದ್ದಾರೆ.
ಎಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ, ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಪ್ರತಿ ವರ್ಷದಂತೆ ಸಹಾಯವಾಣಿ ಆರಂಭಿಸಿದೆ. ದೂ. 080-23310075, 23310076 ಕರೆ ಮಾಡಿ ವಿದ್ಯಾರ್ಥಿಗಳು ತಮ್ಮ ಸಂಶಯಗಳನ್ನು ನಿವಾರಿಸಿಕೊಳ್ಳಬಹುದಾಗಿದೆ. ಪರೀಕ್ಷೆ ಕುಳಿತ ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಲಾಗಿದೆ.
ಪರೀಕ್ಷಾ ವೇಳಾಪಟ್ಟಿ:
ಮಾ.30-ಪ್ರಥಮ ಭಾಷೆ
ಎ. 3-ಗಣಿತ ಎ. 5-ದ್ವಿತೀಯ ಭಾಷೆ
ಎ.7-ವಿಜ್ಞಾನ ಎ.10-ತೃತೀಯ ಭಾಷೆ ಎ.12-ಸಮಾಜ ವಿಜ್ಞಾನ







