ಕಾರು ಢಿಕ್ಕಿ: ಮಹಿಳೆ ಮೃತ್ಯು

ಬ್ರಹ್ಮಾವರ, ಮಾ.28: ಬ್ರಹ್ಮಾವರ ಬಸ್ ನಿಲ್ದಾಣದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ 10ಗಂಟೆ ಸುಮಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಮಹಿಳೆಯೊಬ್ಬರು ಮೃತ ಪಟ್ಟಿದ್ದಾರೆ.
ಮೃತರನ್ನು ಮಟಪಾಡಿ ನಂದನಕುದ್ರುವಿನ ಲಿಲ್ಲಿ ಲೂವಿಸ್(84) ಎಂದು ಗುರುತಿಸಲಾಗಿದೆ.
ರಾಜೇಶ್ ಶೆಟ್ಟಿ ಎಂಬವರು ತನ್ನ ಕಾರನ್ನು ಬ್ರಹ್ಮಾವರ ಕಡೆಯಿಂದ ಉಡುಪಿ ಕಡೆಗೆ ಚಲಾಯಿಸಿಕೊಂಡು ಬಂದು ರಸ್ತೆ ದಾಟಲು ನಿಂತಿದ್ದ ಲಿಲ್ಲಿ ಲೂವಿಸ್‌ಗೆ ಡಿಕ್ಕಿ ಹೊಡೆದರು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಲಿಲ್ಲಿ ಲೂವಿಸ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ 12ಗಂಟೆಗೆ ಮೃತಪಟ್ಟರು.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





