ಎಸೆಸ್ಸೆಲ್ಸಿ ಪರೀಕ್ಷೆ ಹಿನ್ನಲೆ: 12ದಿನ ಪರೀಕ್ಷಾ ಕೇಂದ್ರ ಬಳಿಯ ಜೆರಾಕ್ಸ್ ಅಂಗಡಿ ಬಂದ್!

ಬೆಂಗಳೂರು, ಮಾ.29: ನಾಳೆಯಿಂದ ಎಪ್ರಿಲ್ 12ರವರೆಗೂ ಎಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯುವ ಹಿನ್ನಲೆ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಸಾಲಿನಲ್ಲಿ ಮಾ.30ರಿಂದ ಎ.12ರವರೆಗೂ ಎಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸುವ ಸಲುವಾಗಿ ಬೆಂಗಳೂರು ನಗರ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶಕ್ಕೆ ಅನ್ವಯಿಸುವಂತೆ ನಿಷೇಧಾಜ್ಞೆ ಹಾಗೂ ಸಮೀಪದ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





