Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇಯರ್‌ರಿಂದ ಸರ್ವಾಧಿಕಾರಿ ಧೋರಣೆ ಆರೋಪ:...

ಮೇಯರ್‌ರಿಂದ ಸರ್ವಾಧಿಕಾರಿ ಧೋರಣೆ ಆರೋಪ: ಸ್ಥಾಯಿ ಸಮಿತಿ ಅಧ್ಯಕ್ಷೆಯ ಧರಣಿ,ಸಭಾತ್ಯಾಗ

ವಾರ್ತಾಭಾರತಿವಾರ್ತಾಭಾರತಿ30 March 2017 12:34 PM IST
share
ಮೇಯರ್‌ರಿಂದ ಸರ್ವಾಧಿಕಾರಿ ಧೋರಣೆ ಆರೋಪ: ಸ್ಥಾಯಿ ಸಮಿತಿ ಅಧ್ಯಕ್ಷೆಯ ಧರಣಿ,ಸಭಾತ್ಯಾಗ

ಮಂಗಳೂರು, ಮಾ.30: ಮಹಾನಗರ ಪಾಲಿಕೆಯ ನೂತನ ಮೇಯರ್ ಕವಿತಾ ಸನಿಲ್‌ರವರು ಸರ್ವಾಧಿಕಾರಿ ಧೋರಣೆ ತೋರ್ಪಡಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ನಾಗವೇಣಿಯವರು ಧರಣಿ ನಡೆಸುವ ಜತೆಗೆ ಸಭಾತ್ಯಾಗ ನಡೆಸಿದ ಪ್ರಸಂಗ ಇಂದು ನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ನಡೆಯಿತು.

ಮಂಗಳೂರು ಮಹಾನಗರ ಪಾಲಿಕೆಯ 19ನೆ ಅವಗೆ 30ನೆ ಮೇಯರ್ ಆಗಿ ಆಯ್ಕೆಯಾಗಿರುವ ಕವಿತಾ ಸನಿಲ್‌ರವರ ಪ್ರಥಮ ಸಾಮಾನ್ಯ ಸಭೆಯಲ್ಲಿಯೇ ಈ ಘಟನೆ ನಡೆಯಿತು.

ನಾಡಗೀತೆಯ ಬಳಿಕ ಸಭೆ ಆರಂಭಗೊಳ್ಳುತ್ತಿರುವಂತೆಯೇ ನಗರ ಪಾಲಿಕೆಯ ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿರುವ ನಾಗವೇಣಿಯವರು ತಮ್ಮ ಆಸನವನ್ನು ಸ್ವೀಕರಿಸದೆ ಮೇಯರ್ ಪೀಠದೆದುರು ಧರಣಿ ಕುಳಿತರು.
ಮಹಾನಗರ ಪಾಲಿಕೆಯ ನಗರ ಬಡತನ ನಿರ್ಮೂಲನಾ ಕೋಶದ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಕಾರ್ಯಕ್ರಮವನ್ನು ತನ್ನ ಗಮನಕ್ಕೆ ಬಾರದೆ ಮಾ.31ರಂದು ನಿಗದಿಪಡಿಸಲಾಗಿದೆ. ದಲಿತ ಸಮುದಾಯದ ಅಭ್ಯರ್ಥಿಯಾದ ತನ್ನನ್ನು ಈ ಮೂಲಕ ಕಡೆಗಣಿಸಲಾಗಿದ್ದು, ಅನ್ಯಾಯ ಮಾಡಲಾಗಿದೆ ಎಂದು ಅಸಮಾಧಾನ ತೋಡಿಕೊಂಡರು.

ಈ ಸಂದರ್ಭ ವಿಪಕ್ಷ ಸದಸ್ಯರು ಮೇಯರ್ ಪೀಠದೆದುರು ತೆರಳಿ ಧರಣಿ ನಿರತ ನಾಗವೇಣಿಗೆ ಬೆಂಬಲ ಸೂಚಿಸುತ್ತಾ, ಮೇಯರ್‌ರವರು ಸರ್ವಾಧಿಕಾರಿ ಧೋರಣೆ ತಾಳುತ್ತಿದ್ದಾರೆ ಎಂದು ಆರೋಪಿಸುತ್ತಾ, ಘೋಷಣೆ ಕೂಗಿದರು. ಈ ಸಂದರ್ಭ ಆಡಳಿತ ಪಕ್ಷದ ಕೆಲ ಸದಸ್ಯರು ಕೂಡಾ ಮೇಯರ್ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಲಾರಂಭಿಸಿದರು.

ಮೇಯರ್ ಕವಿತಾ ಸನಿಲ್ ಪ್ರತಿಕ್ರಿಯಿಸಿ, ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ತಮ್ಮ ಸ್ಥಾನಗಳನ್ನು ಸ್ವೀಕರಿಸುವಂತೆ ಮನವಿ ಮಾಡಿಕೊಂಡರು. ಪುರಭವನದಲ್ಲಿ ನಡೆಯಲಿರುವ ಕಾರ್ಯಕ್ರಮ 2016-17ನೆ ಸಾಲಿನ ಅವಯಲ್ಲಿ ಮಂಜೂರಾಗಿರುವ ಸವಲತ್ತುಗಳ ವಿತರಣೆಯದ್ದಾಗಿದೆ. ಸ್ಥಾಯಿ ಸಮಿತಿ ಅಧ್ಯಕ್ಷರು ಈ ಬಗ್ಗೆ ಆಕ್ಷೇಪಿಸಿ ಪತ್ರ ಬರೆದಿದ್ದು, ತನ್ನನ್ನು ಕಡೆಗಣಸಿರುವುದಾಗಿ ಹೇಳಿ, ಕಾರ್ಯಕ್ರಮ ಮುಂದೂಡುವಂತೆ ಕೋರಿದ್ದಾರೆ. ಆದರೆ, ಈ ಕಾರ್ಯಕ್ರಮ ಹಿಂದೆಯೇ ನಿಗದಿಯಾಗಿತ್ತು. ಆದರೆ ಉಸ್ತವಾರಿ ಸಚಿವರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಲಾಗಿತ್ತು. ಇದೀಗ ಸಚಿವರು ನಾಳೆ ಕಾರ್ಯಕ್ರಮ ನಡೆಸಲು ದಿನಾಂಕ ಗೊತ್ತು ಪಡಿಸಿದ್ದಾರೆ ಎಂದು ಮೇಯರ್ ಸಮರ್ಥಿಸಿಕೊಂಡರು.

ಈ ಸಂದರ್ಭ ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಆಡಳಿತ ಪಕ್ಷದ ಕೆಲ ಸದಸ್ಯರು ಕೂಡಾ ತಮ್ಮ ಆಸನಗಳಿಂದ ಎದ್ದು, ಮೇಯರ್ ಸರ್ವಾಕಾರಿ ಧೋರಣೆ ತಳೆಯುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದಾಗ ಆಡಳಿತ ಪಕ್ಷದ ಎರಡು ಗುಂಪುಗಳ ನಡುವೆ ಪರಸ್ಪರ ವಾಗ್ವಾದ ಆರಂಭಗೊಂಡಿತು. ಈ ಸಂದರ್ಭ ಮೇಯರ್‌ರವರು 10 ನಿಮಿಷಗಳ ಕಾಲ ಸಭೆಯನ್ನು ಮುಂದೂಡಿ ಪೀಠದಿಂದ ಎದ್ದು, ತಮ್ಮ ಕೊಠಡಿಗೆ ತೆರಳಿದರು.

ಅತ್ತ ಮೇಯರ್ ಕೊಠಡಿಯಲ್ಲಿ ಶಾಸಕ ಜೆ.ಆರ್. ಲೋಬೋ, ಹಿರಿಯ ಸದಸ್ಯರ ಜತೆ ಸಂಧಾನದ ಮಾತುಕತೆ ನಡೆಯುತ್ತಿದ್ದರೆ, ಪರಿಷತ್ತಿನ ಸಭಾಂಗಣದಲ್ಲಿ ಆಡಳಿತ ಪಕ್ಷದ ಸದಸ್ಯರ ಎರಡು ಗುಂಪುಗಳು ಪರಸ್ಪರ ವಾಗ್ವಾದದಲ್ಲಿ ತೊಡಗಿದವು. ಈ ನಡುವೆ ಪರಿಷತ್ತು ಸಭಾಂಗಣಕ್ಕೆ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜಾ ಹಾಗೂ ಶಾಸಕ ಮೊಯ್ದಿನ್ ಬಾವಾ ಅವರು ಆಗಮಿಸಿ ಸದಸ್ಯರ ಜತೆ ಮಾತುಕತೆ ನಡೆಸಿ ತೆರಳಿದರು.

ಸುಮಾರು ಅರ್ಧ ಗಂಟೆಗೂ ಅಧಿಕ ಸಮಯದ ಬಳಿಕ ಪರಿಷತ್ತಿನ ಸಭಾಂಗಣಕ್ಕೆ ಆಗಮಿಸಿದ ಮೇಯರ್ ಕವಿತಾ ಸನಿಲ್, ಸದಸ್ಯರೆಲ್ಲರೂ ತಮ್ಮ ಸ್ಥಾನಗಳಿಗೆ ತೆರಳುವಂತೆ ಕೋರಿದರು. ಮಾತ್ರವಲ್ಲದೆ, ಸಭೆಯ ದಿನಾಂಕವನ್ನು ಉಸ್ತುವಾರಿ ಸಚಿವರು ನಿಗದಿಪಡಿಸಿರುವುದರಿಂದ, ಅವರ ಗಮನಕ್ಕೆ ಈ ವಿಷಯವನ್ನು ತರುವುದಾಗಿ ಹೇಳಿ, ಸಭೆ ಮುಂದುವರಿಸಲು ಅನುವಾದರು.

ಈ ಸಂದರ್ಭ ಸ್ಥಾಯಿ ಸಮಿತಿ ಅಧ್ಯಕ್ಷೆ ನಾಗವೇಣಿ, ಉಪ ಮೇಯರ್ ರಜನೀಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರತಿಭಾ ಕುಳಾಯಿ ಜತೆ ವಿಪಕ್ಷವಾದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಜತೆಗೆ ಸಿಪಿಎಂನ ದಯಾನಂದ ಶೆಟ್ಟಿ, ಜೆಡಿಎಸ್‌ನ ಅಬ್ದುಲ್ ಅಝೀಝ್ ಕುದ್ರೋಳಿ, ರಮೀಝಾ ಬಾನು, ಎಸ್‌ಡಿಪಿಐ ಅಯಾಝ್, ಪಕ್ಷೇತರರಾದ ರೇವತಿ ಪುತ್ರನ್ ಕೂಡಾ ಸಭೆಯಿಂದ ಹೊರನಡೆದರು.

ಸದಸ್ಯರ ಸಭಾತ್ಯಾಗ- ಮುಂದುವರಿದ ಸಭೆ!
ಸದಸ್ಯರನೇಕರ ಸಭಾ ತ್ಯಾಗದ ಬಳಿಕ ಸಭೆ ಮುಂದುವರಿಸುವ ಕುರಿತಂತೆ ಕೆಲ ಹೊತ್ತು ಮನಪಾ ಆಯುಕ್ತ ಮುಹಮ್ಮದ್ ನಝೀರ್‌ರವರ ಸಮಕ್ಷಮದಲ್ಲಿ ಮಾತುಕತೆ ನಡೆಯಿತು. ಸಂಸದರು (1), ಶಾಸಕರು (4) ಹಾಗೂ ನಾಮ ನಿರ್ದೇಶಿತ ಸದಸ್ಯರು (5) ಹಾಗೂ 60 ಮಂದಿ ಮನಪಾ ಸದಸ್ಯರು ಸೇರಿ ಒಟ್ಟು 70 ಅಭ್ಯರ್ಥಿಗಳ ಸಾಮರ್ಥ್ಯವನ್ನು ಕೂಡಿರುವ ಪರಿಷತ್ತಿನ ಕಲಾಪ ನಡೆಸಲು ಮೂರನೇ ಒಂದರಷ್ಟು (23.3) ಅಭ್ಯರ್ಥಿಗಳ ಹಾಜರಾತಿ ಕಡ್ಡಾಯ. ಅದರಂತೆ 24 ಸದಸ್ಯರು ಸಭೆಯಲ್ಲಿರುವುದಾಗಿ ಹೇಳಿ ಆಯುಕ್ತರು ಸಭೆ ನಡೆಸಲು ಅವಕಾಶ ಮಾಡಿಕೊಟ್ಟರು.

ಸಭೆಯಲ್ಲಿ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ರವೂಫ್, ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ ಸಬಿತ ಮಿಸ್ಕಿತ್ ಉಪಸ್ಥಿತರಿದ್ದರು.

ದಲಿತ ಮಹಿಳೆಯ ನಿರ್ಲಕ್ಷ್ಯ
ಮನಪಾ ಪರಿಷತ್ತಿನ ಸಭೆಯಲ್ಲಿ ಧರಣಿ ನಡೆಸಿ ಸಭಾತ್ಯಾಗ ಮಾಡಿದ ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿರುವ ನಾಗವೇಣಿಯವರು ಸುದ್ದಿಗಾರರ ಜತೆ ಮಾತನಾಡುತ್ತಾ, ‘‘ಮೇಯರ್‌ರವರು ಸೌಜನ್ಯಕ್ಕಾದರು ನನ್ನ ಬಳಿ ಮಾತನಾಡಬೇಕಿತ್ತು. ದಲಿತ ವರ್ಗದ ಮಹಿಳೆಯಾಗಿರುವ ನಾನು ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು, ಮೇಯರ್‌ರವರು ನನ್ನನ್ನು ಕಡೆಗಣಿಸಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ.’’
-ನಾಗವೇಣಿ, ಅಧ್ಯಕ್ಷರು, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X