Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಡೈರಾ ವಿಮಾನ ನಿಲ್ದಾಣಕ್ಕೆ ರೊನಾಲ್ಡೊ...

ಮಡೈರಾ ವಿಮಾನ ನಿಲ್ದಾಣಕ್ಕೆ ರೊನಾಲ್ಡೊ ಹೆಸರು

ತಮಾಷೆಗೆ ಕಾರಣವಾದ ರೊನಾಲ್ಡೊರ ಕಂಚಿನ ಪ್ರತಿಮೆ

ವಾರ್ತಾಭಾರತಿವಾರ್ತಾಭಾರತಿ30 March 2017 2:00 PM IST
share
ಮಡೈರಾ ವಿಮಾನ ನಿಲ್ದಾಣಕ್ಕೆ ರೊನಾಲ್ಡೊ ಹೆಸರು

ಫುಂಚಲ್, ಮಾ.30: ಪೋರ್ಚುಗಲ್‌ನ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊರ ತವರು ಪಟ್ಟಣ ಮಡೈರಾ ದ್ವೀಪದಲ್ಲಿರುವ ವಿಮಾನ ನಿಲ್ದಾಣಕ್ಕೆ ರೊನಾಲ್ಡೊರ ಹೆಸರಿಡಲಾಗಿದೆ.

ನಾಲ್ಕು ಬಾರಿ ವಿಶ್ವದ ಆಟಗಾರ ಪ್ರಶಸ್ತಿಯನ್ನು ಪಡೆದಿರುವ ರೊನಾಲ್ಡೊ ಫುಟ್ಬಾಲ್ ಕೌಶಲ ಹಾಗೂ ತನ್ನ ಆಕರ್ಷಕ ನೋಟದ ಮೂಲಕ ವಿಶ್ವದ ಗಮನವನ್ನು ತನ್ನತ್ತ ಸೆಳೆದಿದ್ದಾರೆ. ಆದರೆ, ವಿಮಾನ ನಿಲ್ದಾಣಕ್ಕೆ ರೊನಾಲ್ಡೊ ಹೆಸರಿಡುವ ಸಂದರ್ಭದಲ್ಲಿ ಅನಾವರಣಗೊಳಿಸಲಾದ ಕಂಚಿನ ಪುತ್ಥಳಿ ಎಲ್ಲರ ಚಿತ್ತವನ್ನು ತನ್ನತ್ತ ಸೆಳೆದಿದೆ. ಇದು ರೊನಾಲ್ಡೊರ ಪ್ರತಿರೂಪದ ಪುತ್ಥಳಿಯೇ ಎಂಬ ಬಗ್ಗೆ ಅನುಮಾನವನ್ನು ಹುಟ್ಟುಹಾಕಿದೆ. ಹಲ್ಲುಕಿರಿದು ನಗುತ್ತಿರುವ ಹಾಗೂ ಉಬ್ಬು ಕಣ್ಣಿನ ಕಂಚಿನ ಪುತ್ಥಳಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದ್ದು, ಈ ಮೂರ್ತಿ ಎಲ್ಲರ ಮುಖದಲ್ಲೂ ನಗು ಮೂಡಿಸಿದೆ.

 ರೊನಾಲ್ಡೊರ ಅಭಿಮಾನಿಗಳು ಪುತ್ಥಳಿಯ ಬಗ್ಗೆ ಪ್ರಶ್ನೆ ಎತ್ತಿದ್ದು, ಇದು ನಮ್ಮ ಹೀರೋ ರೊನಾಲ್ಡೊರ ಬದಲಿಗೆ ರಿಪಬ್ಲಿಕ್ ಆಫ್ ಐರ್ಲೆಂಡ್‌ನ ಮಾಜಿ ನಾಯಕ ನಿಯಾಲ್ ಕ್ವಿನ್‌ರನ್ನು ಹೋಲುತ್ತಿದೆ ಎಂದು ಹೇಳಿದ್ದಾರೆ.

ಮಡೈರಾ ದ್ವೀಪದಲ್ಲಿರುವ ವಿಮಾನ ನಿಲ್ದಾಣವನ್ನು ಕ್ರಿಸ್ಟಿಯಾನೊ ರೊನಾಲ್ಡೊ ಏರ್‌ಪೋರ್ಟ್ ಎಂದು ಮರು ನಾಮಕರಣಗೊಳಿಸಿದ ಕಾರ್ಯಕ್ರಮದಲ್ಲಿ 32ರ ಹರೆಯದ ರೊನಾಲ್ಡೊ, ಅವರ ಗೆಳತಿ ಜಾರ್ಜಿನಾ ರೊಡ್ರಿಗಝ್, ತಾಯಿ ಮರಿಯಾ ಅವರು ಉಪಸ್ಥಿತರಿದ್ದರು.

ಪೋರ್ಚುಗಲ್‌ನ ಅಧ್ಯಕ್ಷರು ಹಾಗೂ ಪ್ರಧಾನಮಂತ್ರಿಗಳು ಮಡೈರಾ ದ್ವೀಪಕ್ಕೆ ತೆರಳಿ ರೊನಾಲ್ಡೊರಿಗೆ ಶುಭಾಶಯ ಕೋರಿದರು. ಫುಂಚಾಲ್‌ನಲ್ಲಿ ರೊನಾಲ್ಡೊರ ಮ್ಯೂಸಿಯಂನ್ನು ಈಗಾಗಲೇ ಸ್ಥಾಪಿಸಲಾಗಿದೆ.

ಏರ್‌ಪೋರ್ಟ್‌ಗೆ ಫುಟ್ಬಾಲ್ ಆಟಗಾರನ ಹೆಸರಿಡುವುದು ಇದೇ ಮೊದಲಲ್ಲ. 2006ರಲ್ಲಿ ಮಾಜಿ ಮ್ಯಾಂಚೆಸ್ಟರ್ ಆಟಗಾರ ಜಾರ್ಜ್ ಬೆಸ್ಟ್ ಸ್ಮರಣಾರ್ಥ ಬೆಲ್‌ಫಾಸ್ಟ್ ಏರ್‌ಪೋರ್ಟ್‌ಗೆ ಜಾರ್ಜ್ ಬೆಸ್ಟ್ ಹೆಸರನ್ನು ಇಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X