ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕೃಷಿಕ ಬಲಿ

ಚಿಕ್ಕಮಗಳೂರು, ಮಾ.30: ಕಾಡಾನೆಯೊಂದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕನನ್ನು ತುಳಿದು ಬಲಿಪಡೆದುಕೊಂಡಿರುವ ಘಟನೆ ನಗರದ ಹೊರವಲಯದ ಹೊಸಪೇಟೆ ಬಳಿಯ ಬಿದರಹಳ್ಳಿ ಎಂಬಲ್ಲಿ ಬುಧವಾರ ನಡೆದಿದೆ.
ಮೃತರನ್ನು ವಾಜೀದ್(35) ಎಂದು ಗುರುತಿಸಲಾಗಿದೆ. ಇವರು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ದಿಡೀರ್ ನುಗ್ಗಿ ದಾಳಿ ನಡೆಸಿದ ಕಾಡಾನೆ ಅವರನ್ನು ತೀವ್ರವಾಗಿ ಘಾಯಗೊಳಿಸಿದೆ. ಈ ವೇಳೆ ವಾಜೀದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
Next Story





