Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾಲೆಮಾರ್ ಆರೋಪದಲ್ಲಿ ಹುರುಳಿಲ್ಲ:...

ಪಾಲೆಮಾರ್ ಆರೋಪದಲ್ಲಿ ಹುರುಳಿಲ್ಲ: ಮೊಯ್ದಿನ್ ಬಾವ

ವಾರ್ತಾಭಾರತಿವಾರ್ತಾಭಾರತಿ30 March 2017 7:29 PM IST
share
ಪಾಲೆಮಾರ್ ಆರೋಪದಲ್ಲಿ ಹುರುಳಿಲ್ಲ: ಮೊಯ್ದಿನ್ ಬಾವ

ಮಂಗಳೂರು, ಮಾ.30: ಸುರತ್ಕಲ್ ಮಾರುಕಟ್ಟೆಯ ಬಗ್ಗೆ ಮಾಜಿ ಸಚಿವ ಕೃಷ್ಣ ಪಾಲೆಮಾರ್ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಶಾಸಕ ಬಿ.ಎ.ಮೊಯ್ದಿನ್ ಬಾವಾ ಹೇಳಿದ್ದಾರೆ.

ಗುರುವಾರ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲೆಮಾರ್ ತಾನು ಶಾಸಕ, ಸಚಿವನಾಗಿದ್ದಾಗ ಸುರತ್ಕಲ್ ಮಾರುಕಟ್ಟೆಯ ಅಭಿವೃದ್ಧಿಗೆ 8 ಕೋ.ರೂ. ಮತ್ತು ರಸ್ತೆಗೆ 3 ಕೋ.ರೂ. ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಅಂತಹ ಯಾವುದೇ ಅಭಿವೃದ್ಧಿ ಕಾರ್ಯಗಳು ಅಲ್ಲಿ ನಡೆದಿಲ್ಲ. ಈ ಬಗ್ಗೆ ಪಾಲೆಮಾರ್ ದಾಖಲೆ ಬಿಡುಗಡೆ ಮಾಡಬೇಕು ಎಂದರು.

ಸುರತ್ಕಲ್‌ನ ಗೋಮಾಳ ಜಾಗದಲ್ಲಿ ನಿರ್ಮಿಸುತ್ತಿರುವ ತಾತ್ಕಾಲಿಕ ಮಾರುಕಟ್ಟೆಯನ್ನು ಚುನಾವಣಾ ಗಿಮಿಕ್ ಎಂದು ಪಾಲೆಮಾರ್ ಆರೋಪಿಸುತ್ತಾರೆ. ಇದರಲ್ಲಿ ಯಾವುದೇ ಗಿಮಿಕ್ ಇಲ್ಲ. ಚುನಾವಣೆ ಸಂದರ್ಭ ನೀಡಿದ ಆಶ್ವಾಸನೆಯನ್ನು ಈಡೇರಿಸುತ್ತಿದ್ದೇನೆ. ಮಾರುಕಟ್ಟೆ ಅಭಿವೃದ್ಧಿಗೆ ಬಳಸಿದ 8 ಕೋ.ರೂ. ಬಗ್ಗೆ ತನಿಖೆ ನಡೆಸಬೇಕಾಗಿದೆ ಎಂದು ಒತ್ತಾಯಿಸಿದ ಅವರು, ಸುರತ್ಕಲ್ ರಸ್ತೆಯ ಬದಲು ಮಂಗಳೂರಿನಲ್ಲಿರುವ ಅವರ ಅಪಾರ್ಟ್‌ಮೆಂಟ್‌ನ ರಸ್ತೆಗಳಿಗೆ ಹಣ ವಿನಿಯೋಗಿಸಿರಬೇಕು ಎಂದು ವ್ಯಂಗ್ಯವಾಡಿದರು.

ಗೋಮಾಳ ಜಾಗದಲ್ಲಿ ಕಂದಾಯ ನಿರೀಕ್ಷಕರ ಕಚೇರಿ ಮೊದಲಾದ ಶಾಶ್ವತ ಕಟ್ಟಡಗಳಿವೆ. ಅದನ್ನು ಕಟ್ಟುವಾಗ ಅವರಿಗೆ ಗೋಮಾಳ ಜಾಗ ಎಂದು ಗೊತ್ತಿರಲಿಲ್ಲವೇ? ಇದೀಗ ತಾನು ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ದಿ ಕಾಮಗಾರಿಗಳನ್ನು ನೋಡಿ ಸಹಿಸಲಾಗದೆ ವೃಥಾ ಆರೋಪ ಮಾಡುತ್ತಿದ್ದಾರೆ ಎಂದರು.

ಸುರತ್ಕಲ್‌ನಲ್ಲಿ ಸುಸಜ್ಜಿತ ಮಾರುಕಟ್ಟೆ ಇಲ್ಲದೆ ವ್ಯಾಪಾರಿಗಳು ಪರದಾಡುವಂತಾಗಿದೆ. ಇಲ್ಲಿ ಮೈದಾನ, ಮುಡಾ ವಾಣಿಜ್ಯ ಸಂಕೀರ್ಣ, ಮನಪಾ ಮಾರುಕಟ್ಟೆ, ರಸ್ತೆ ನಿರ್ಮಾಣಕ್ಕಾಗಿ 120 ಕೋ.ರೂ. ವೆಚ್ಚದಲ್ಲಿ ಅಂದಾಜು ಪಟ್ಟಿ ತಯಾರಿಸಲಾಗಿದೆ. ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ಕಾರ್ಯಗತ ಮಾಡಲು ಸಿದ್ಧರಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾರ್ಪೊರೇಟರ್ ಬಶೀರ್ ಅಹ್ಮದ್, ಮಾಜಿ ಕಾರ್ಪೊರೇಟರ್ ಹರೀಶ್, ಮಾಜಿ ಜಿಪಂ ಸದಸ್ಯ ಕೃಷ್ಣ ಅಮೀನ್, ಕುಪ್ಪೆಪದವು ಗ್ರಾಪಂ ಸದಸ್ಯ ಹಿರಣಾಕ್ಷ ಕೋಟ್ಯಾನ್ ಉಪಸ್ಥಿತರಿದ್ದರು.

ಧಾರ್ಮಿಕ ಸಂಸ್ಥೆಗಳಿಗೆ 20 ಲಕ್ಷ ರೂ.

ಮಾರ್ಚ್ ತಿಂಗಳಿನಲ್ಲಿ ಮುಕ್ಕ ಸತ್ಯಧರ್ಮದೇವಿ ದೇವಸ್ಥಾನ, ಪಂಜಿಮೊಗರು, ವಿದ್ಯಾನಗರ ಕೃಷ್ಣ ಮಂದಿರ, ಕಾಟಿಪಳ್ಳ, ಕೈಕಂಬ ನಿತ್ಯಾನಂದ ಭಜನಾ ಮಂದಿರ, ಕಾಟಿಪಳ್ಳ ರಾಮಂಜನೇಯ ಭಜನಾ ಮಂದಿರ, ಇಡ್ಯಾ ಗುಡ್ಡಕೊಪ್ಪಳ ರಾಮ ಮಂದಿರಕ್ಕೆ ತಲಾ 4 ಲಕ್ಷ ರೂ. ನಂತೆ 20 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬಾವ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X