ಉಡುಪಿ : ಎಸ್ಸೆಸೆಲ್ಸಿ ಪರೀಕ್ಷೆ ಆರಂಭ - 195 ಮಂದಿ ಗೈರು
ಉಡುಪಿ, ಮಾ.30: ಈ ಬಾರಿಯ ಎಸ್ಸೆಸೆಲ್ಸಿ ಪರೀಕ್ಷೆಗಳು ಬಿಗುಭದ್ರತೆ ಹಾಗೂ ಕಟ್ಟುನಿಟ್ಟಿನ ಕ್ರಮಗಳ ನಡುವೆ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ಪ್ರಾರಂಭಗೊಂಡಿದೆ.
ಮೊದಲ ದಿನ ಪ್ರಥಮ ಭಾಷಾ ಪರೀಕ್ಷೆ ನಡೆಯಿತು. ಒಟ್ಟು 15,029 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಹೆಸರು ನೊಂದಾಯಿಸಿಕೊಂಡಿದ್ದು, ಇವರಲ್ಲಿ 14,834 ಮಂದಿ ಪರೀಕ್ಷೆ ಬರೆದಿದ್ದು, 195 ಮಂದಿ ಗೈರುಹಾಜರಾ ಗಿದ್ದಾರೆ ಎಂದು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಯಾವುದೇ ಪರೀಕ್ಷಾ ಕೇಂದ್ರದಿಂದ ಅಕ್ರಮ ಹಾಗೂ ಅವ್ಯವಹಾರದ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
Next Story





