Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರದೇಶದಲ್ಲಿ ಹಳಿ ತಪ್ಪಿದ ರೈಲು : 52...

ಉ.ಪ್ರದೇಶದಲ್ಲಿ ಹಳಿ ತಪ್ಪಿದ ರೈಲು : 52 ಮಂದಿಗೆ ಗಾಯ

ವಿಧ್ವಂಸಕ ಕೃತ್ಯದ ಶಂಕೆ

ವಾರ್ತಾಭಾರತಿವಾರ್ತಾಭಾರತಿ30 March 2017 9:00 PM IST
share
ಉ.ಪ್ರದೇಶದಲ್ಲಿ ಹಳಿ ತಪ್ಪಿದ ರೈಲು : 52 ಮಂದಿಗೆ ಗಾಯ

ಲಕ್ನೊ, ಮಾ.30: ಜಬಲ್‌ಪುರ- ನಿಝಾಮುದ್ದೀನ್ ಸ್ಟೇಷನ್ ನಡುವೆ ಸಂಚರಿಸುವ ಮಹಾಕೌಶಲ್ ಎಕ್ಸ್‌ಪ್ರೆಸ್ ರೈಲು ಇಂದು ಬೆಳಿಗ್ಗೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಕುಲ್ಪಹಾರ್ ಸ್ಟೇಷನ್ ಬಳಿ ಹಳಿ ತಪ್ಪಿದ ಕಾರಣ ಕನಿಷ್ಠ 52 ಮಂದಿ ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಮತ್ತು ಅಲ್ಪಪ್ರಮಾಣದಲ್ಲಿ ಗಾಯಗೊಂಡವರಿಗೆ 25000 ರೂ. ಪರಿಹಾರ ಧನವನ್ನು ರಾಜ್ಯ ಸರಕಾರ ಘೋಷಿಸಿದೆ.

ಹಳಿಗಳ ಅಸಮರ್ಪಕ ಜೋಡಣೆ ದುರಂತಕ್ಕೆ ಕಾರಣ ಎಂದು ಆರಂಭಿಕ ಪರಿಶೀಲನೆಯಿಂದ ತಿಳಿದು ಬಂದಿದೆ. ಆದರೆ ವಿಧ್ವಂಸಕ ಕೃತ್ಯದ ಸಾಧ್ಯತೆಯನ್ನೂ ಅಲ್ಲಗಳೆಯಲಾಗದು ಎಂದು ತಿಳಿಸಿರುವ ರಾಜ್ಯದ ಆರೋಗ್ಯ ಸಚಿವ ಸಿದ್ದಾರ್ಥ ನಾಥ್ ಸಿಂಗ್, ಘಟನೆಯ ಬಗ್ಗೆ ರಾಷ್ಟ್ರೀಯ ತನಿಖಾ ಮಂಡಳಿ ತನಿಖೆ ನಡೆಸಲಿದೆ . ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ನಿಖೆಯಲ್ಲಿ ಸಹಕರಿಸಲಿದೆ ಎಂದಿದ್ದಾರೆ.

ಎಟಿಎಸ್, ರೈಲ್ವೇ ಪೊಲೀಸರು ಘಟನಾ ಸ್ಥಳದಲ್ಲಿದ್ದಾರೆ. ರಾಷ್ಟ್ರೀಯ ತನಿಖಾ ಮಂಡಳಿ ಮತ್ತು ಉತ್ತರ ಪ್ರದೇಶ ಪೊಲೀಸರು ಜಂಟಿಯಾಗಿ ತನಿಖೆ ನಡೆಸಲಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿಯವರಿಗೆ ವರದಿ ನೀಡಲಿದ್ದೇನೆ ಎಂದು ಸಚಿವರು ತಿಳಿಸಿದರು.

ಅಪಘಾತ ಪರಿಹಾರ ರೈಲು, 15 ಪ್ಯಾಸೆಂಜರ್ ರೈಲುಗಳು ಹಾಗೂ 20 ಆ್ಯಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಗಾಯಗೊಂಡವರನ್ನು ಮಹೋಬಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರ ಮತ್ತು ರೈಲ್ವೇ ಇಲಾಖೆಯ ಸಿಬ್ಬಂದಿಗಳ ನೆರವಿನಿಂದ ಪೊಲೀಸರು ರೈಲ್ವೇ ಬೋಗಿಗಳಲ್ಲಿ ಸಿಕ್ಕಿಬಿದ್ದಿದ್ದ ಪ್ರಯಾಣಿಕರನ್ನು ರಕ್ಷಿಸಿದರು.

52 ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇವರಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಝಾನ್ಸಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮಹೋಾದ ಮುಖ್ಯ ವೈದ್ಯಾಧಿಕಾರಿ ತಿಳಿಸಿದ್ದಾರೆ.

ರೈಲು ನಿಧಾನವಾಗಿ ಚಲಿಸುತ್ತಿದ್ದ ಕಾರಣ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಬಳಿಕ ಸುಮಾರು 18 ರೈಲುಗಳ ಸಂಚಾರವನ್ನು ರದ್ದುಪಡಿಸಲಾಯಿತು ಮತ್ತು ಆರಕ್ಕೂ ಹೆಚ್ಚು ರೈಲುಗಳ ಮಾರ್ಗವನ್ನು ಬದಲಿಸಲಾಯಿತು.

ಘಟನೆಯ ಬಗ್ಗೆ ತನಿಖೆ ನಡೆಸಲು ಉತ್ತರ ಕೇಂದ್ರ ರೈಲ್ವೇಯು ಸಮಿತಿಯೊಂದನ್ನು ರಚಿಸಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X