ವಾಣಿಜ್ಯಶಾಸ್ತ್ರ ಮತ್ತು ವ್ಯವಹಾರಾಡಳಿತ ವಿಭಾಗದ ವಿದ್ಯಾಥಿಗಳಿಗೆ ವಿಪುಲ ಅವಕಾಶಗಳು :ಡಾ. ಪ್ರಕಾಶ್ ಪಿಂಟೋ
ಹಳೆಯಂಗಡಿ ಸರಕಾರಿ ಕಾಲೇಜಿನಲ್ಲಿ ಯುಜಿಸಿ ಪ್ರಾಯೋಜಿತ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ಮುಲ್ಕಿ, ಮಾ.30: ಬಿಕಾಂ ಮತ್ತು ಬಿಬಿಎಂ ಪದವಿ ಪಡೆಯುವ ವಿದ್ಯಾರ್ಥಿಗಳಿಗೆ ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ವಿಪುಲ ಉದ್ಯೋಗ ಅವಕಾಶಗಳಿವೆ ಎಂದು ಸಂತ ಜೋಸೆಫ್ ತಾಂತ್ರಿಕ ವಿದ್ಯಾಲಯದ ಎಂ.ಬಿ.ಎ ವಿಭಾಗದ ಡೀನ್ ಡಾ. ಪ್ರಕಾಶ್ ಪಿಂಟೋ ಶಿರ್ತಾಡಿ ಹೇಳಿದರು.
ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಳೆಯಂಗಡಿ ಇದರ ಕೆರಿಯರ್ ಗೈಡೆನ್ಸ್ ಮತ್ತು ಪ್ಲೇಸ್ ಮೆಂಟ್ ಸೆಲ್ ಇದರ ಆಶ್ರಯದಲ್ಲಿ ಕಾಲೇಜಿನ ಸಭಾಭವನದಲ್ಲಿ ಗುರುವಾರ ಜರಗಿದ ಯು.ಜಿ.ಸಿ ಪ್ರಾಯೋಜಿತ ವೃತ್ತಿ ಮಾರ್ಗದರ್ಶನ ಕಾರ್ಯಗಾರದ ದಿಕ್ಸೂಚಿ ಭಾಷಣ ಮಾಡುತ್ತಿದ್ದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಸಂವಹನ ಶೀಲರಾಗಿರಬೇಕು ಮತು ಸಂವಹನೆಯಲ್ಲಿ ಕ್ಷಮತೆ ಸುಧಾರಿಸಿದಲ್ಲಿ ವಿದ್ಯಾರ್ಥಿಗಳ ಕಾರ್ಯ ನಿರ್ವಹಣೆಯ ಗುಣಮಟ್ಟ ಹೆಚ್ಚುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ವಸಂತ್ ಬೆರ್ನಾಡ್ ವಿದ್ಯಾರ್ಥಿಗಳಿಗೆ ಶುಹಾರೈಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಸಂತ ಜೋಸೆಫ್ ತಾಂತ್ರಿಕ ವಿದ್ಯಾಲಯದ ಎಂ.ಬಿ.ಎ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ವಿನೀಶ್ ಪಿ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಪ್ರಾಂಶುಪಾಲ ಪ್ರೊ. ವಿಶ್ವಾನಾಥ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಕೆರಿಯರ್ ಗೈಡೆನ್ಸ್ ಮತ್ತು ಪ್ಲೇಸ್ ಮೆಂಟ್ ಸೆಲ್ ನ ಸಂಯೋಜಕ ಡಾ. ಸಂತೋಷ್ ಪಿಂಟೋ ಶಿರ್ತಾಡಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಶಶಿಕಲಾ ಕೆ. ಮತ್ತು ಕನ್ನಡ ವಿಭಾಗದ ಮುಖ್ಯಸ್ಥರಾದ ಪಿ.ಬಿ. ಪ್ರಸನ್ನ ಉಪಸ್ಥತರಿದ್ದರು. ವಿದ್ಯಾರ್ಥಿನಿ ಪೂಜಾ ಕಾರ್ಯಕ್ರಮ ನಿರ್ವಹಿಸಿದರು. ಭವ್ಯ ವಂದಿಸಿದರು. ದಿವ್ಯ ಮತ್ತು ಮುಕ್ತಾರ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು







