ವಿರಾಟ್ ಕೊಹ್ಲಿಗೆ ಪದ್ಮಶ್ರೀ ಪ್ರದಾನ

ಹೊಸದಿಲ್ಲಿ, ಮಾ.31: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಪ್ಯಾರಾಲಿಂಪಿಯನ್ ದೀಪಾ ಮಲಿಕ್, ಮತ್ತು ಹಾಕಿ ತಂಡದ ನಾಯಕ ಪಿ.ಆರ್.ಶ್ರೀಜೇಶ್ ಅವರಿಗೆ ಗುರುವಾರ ಪ್ರತಿಷ್ಠಿತ ನಾಗರಿಕ ಪುರಸ್ಕಾರ ಪದ್ಮಶ್ರೀ ಪ್ರದಾನ ಮಾಡಲಾಯಿತು.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.
ವಿರಾಟ್ ಕೊಹ್ಲಿ 2016ರಲ್ಲಿ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಟೆಸ್ಟ್ ನಲ್ಲಿ 1215 ರನ್ ದಾಖಲಿಸಿದ್ದರು. ನಾಲ್ಕು ಸರಣಿಗಳಲ್ಲಿ ನಾಲ್ಕು ದ್ವಿಶತಕ ದಾಖಲಿಸಿದ್ದರು. ಕೊಹ್ಲಿ ನಾಯಕತ್ವದಲ್ಲಿ ಭಾರತ ನಾಲ್ಕು ಟೆಸ್ಟ್ ಸರಣಿಗಳಲ್ಲಿ ಭಾರತ ಸರಣಿ ಜಯ ದಾಖಲಿಸಿತ್ತು.
Next Story





