ಮದ್ಯದಂಗಡಿ ತೆರವು ಆದೇಶ ಮಾರ್ಪಾಡಿಗೆ ಸುಪ್ರೀಂ ನಕಾರ

ಹೊಸದಿಲ್ಲಿ, ಮಾ.31: ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ಕಾರ್ಯಚರಿಸುತ್ತಿರುವ ಮದ್ಯದಂಗಡಿಗಳನ್ನು ಮುಚ್ಚುವಂತೆ ನೀಡಿದ್ದ ಆದೇಶವನ್ನು ಮಾರ್ಪಾಡುಗೊಳಿಸಲು ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ರಾಷ್ಟ್ರೀಯ ಮತ್ತು ರಾಜ್ಯಹೆದ್ದಾರಿಯ ಪಕ್ಕದಲ್ಲಿ ಐನೂರು ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ಮಾ.31ರ ಮೊದಲು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಆದೇಶ ನೀಡಿತ್ತು,.
ಹೆಚ್ಚುತ್ತಿರುವ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ 500 ಮೀಟರ್ ಒಳಗೆ ಎಪ್ರಿಲ್ 1ರಿಂದ ಯಾವುದೇ ಮದ್ಯದಂಗಡಿ ಇರಕೂಡದೆಂದು ಸುಪ್ರೀಂ ಕೋರ್ಟ್ ಕಳೆದ ಡಿಸೆಂಬರ್ ನಲ್ಲಿ ಆದೇಶ ನೀಡಿತ್ತು.
Next Story





