ಗ್ರಾಪಂ ಕಾರ್ಯದರ್ಶಿ ಮೇಲೆ ಹಲ್ಲೆ

ಚಿಕ್ಕಮಗಳೂರು, ಮಾ.31: ಹಳೆ ವೈಷಮ್ಯ ಹಿನ್ನಲೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮ ಪಂಚಾಯತ್ ಕಾರ್ಯದರ್ಶಿ ಶಿವಕುಮಾರ್ ಎಂಬವರ ಮೇಲೆ ಹಲ್ಲೆ ಮಾಡಿರುವುದಾಗಿ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಗರದ ಹೊರವಲಯದಲ್ಲಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆಯಲ್ಲಿ ಕಣ್ಣಿಗೆ ಖಾರದಪುಡಿ ಎರಚಿ ರಾಡ್‌ನಿಂದ ಗಂಭೀರವಾಗಿ ಹಲ್ಲೆ ಮಾಡಲಾಗಿದೆ. ಹಲ್ಲೆಯಿಂದ ಶಿವಕುಮಾರ್ ತಲೆ ಹಾಗೂ ಕೈಗೆ ಗಂಭೀರ ಗಾಯಗಳಾಗಿವೆ.
ಚಿಕ್ಕಗೌಜ ಗ್ರಾಮದ ಅಣ್ಣಪ್ಪ ಎಂಬಾತ ಈ ಹಲ್ಲೆ ಆರೋಪಿಯಾಗಿದ್ದಾನೆ. ಪೊಲೀಸರಿಗೆ ದೂರು ನೀಡದಂತೆ ಕೊಲೆ ಬೆದರಿಕೆ ಹಾಕಿ ಸ್ಥಳದಿಂದ ಆರೋಪಿ ಪರಾರಿಯಾಗಿದ್ದಾನೆ. ಸ್ಥಳದಲ್ಲಿ ಗಾಯದಿಂದ ನರಳುತ್ತಿದ್ದ ಶಿವಕುಮಾರ್‌ರನ್ನು ಸ್ಥಳೀಯರು ಸಖರಾಯಪಟ್ಟಣ ಪೊಲೀಸ್ ಠಾಣೆಗೆ ಕರೆ ತಂದಿದ್ದರು. ಘಟನೆ ಕುರಿತು ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Next Story





