Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೆರೆಯ ರಾಷ್ಟ್ರಗಳಿಗೆ ವಿದ್ಯುತ್ ರಫ್ತು...

ನೆರೆಯ ರಾಷ್ಟ್ರಗಳಿಗೆ ವಿದ್ಯುತ್ ರಫ್ತು : ಚೀನಾಕ್ಕೆ ಸವಾಲೆಸೆಯಲು ಮೋದಿ ತಂತ್ರ

ವಾರ್ತಾಭಾರತಿವಾರ್ತಾಭಾರತಿ31 March 2017 9:29 PM IST
share
ನೆರೆಯ  ರಾಷ್ಟ್ರಗಳಿಗೆ ವಿದ್ಯುತ್ ರಫ್ತು : ಚೀನಾಕ್ಕೆ ಸವಾಲೆಸೆಯಲು ಮೋದಿ ತಂತ್ರ

ಹೊಸದಿಲ್ಲಿ, ಮಾ.31: ಇದೇ ಪ್ರಪ್ರಥಮ ಬಾರಿಗೆ ಭಾರತವು ವಿದ್ಯುತ್ ಶಕ್ತಿಯನ್ನು ರಫ್ತು ಮಾಡುವ ಹಂತಕ್ಕೆ ತಲುಪಿದ್ದು , ನೆರೆಹೊರೆಯ ಕೆಲವು ಸಣ್ಣ ರಾಷ್ಟ್ರಗಳಿಗೆ ವಿದ್ಯುತ್ ಶಕ್ತಿಯ ಕೊರತೆ ನೀಗಿಸುವಲ್ಲಿ ನೆರವಾಗುವ ಮೂಲಕ ಈ ರಾಷ್ಟ್ರಗಳು ಚೀನಾ ಪರ ಹೊಂದಿರುವ ಧೋರಣೆಯಲ್ಲಿ ಗಮನಾರ್ಹ ಬದಲಾವಣೆ ತರಲು ಭಾರತ ಮುಂದಾಗಿದೆ.

ಕಳೆದ ಎಪ್ರಿಲ್‌ನಿಂದ ಫೆಬ್ರವರಿ ವರೆಗಿನ ಅವಧಿಯಲ್ಲಿ ಭೂತಾನ್‌ನಿಂದ ಖರೀದಿಸಿದ 5.6 ಬಿಲಿಯನ್ ಯೂನಿಟ್ ವಿದ್ಯುತ್‌ಗಿಂತ 213 ಮಿಲಿಯನ್ ಯೂನಿಟ್‌ನಷ್ಟು ಹೆಚ್ಚು ವಿದ್ಯುತ್ ಅನ್ನು ನೇಪಾಳ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ದೇಶಗಳಿಗೆ ರಫ್ತು ಮಾಡಲಾಗಿದೆ ಎಂದು ವಿದ್ಯುತ್ ಇಲಾಖೆ ಸಚಿವಾಲಯದ ಪ್ರಕಟಣೆ ತಿಳಿಸಿದೆ.

‘ಪೂರ್ವದತ್ತ ನೋಡು’ ಎಂಬ 1990ರ ಕಾರ್ಯನೀತಿಯನ್ನು ಪ್ರಧಾನಿ ಮೋದಿ ‘ಪೂರ್ವದತ್ತ ಕ್ರಿಯಾಶೀಲನಾಗು’ ಎಂದು ಉನ್ನತೀಕರಿಸಿದ್ದು ವಿಶ್ವದ ಅತ್ಯಂತ ಕನಿಷ್ಠ ಆರ್ಥಿಕ ಬೆಳವಣಿಗೆ ಹೊಂದಿರುವ ರಾಷ್ಟ್ರಗಳ ಮೇಲೆ ಪ್ರಭಾವ ಬೀರುವ ಚೀನಾದ ಆಶಯಕ್ಕೆ ಸವಾಲೊಡ್ಡುವ ಇರಾದೆ ಹೊಂದಿದೆ. ಭಾರತದ ಬದ್ಧವೈರಿ ಪಾಕಿಸ್ತಾನದಲ್ಲಿ ವಿದ್ಯುತ್ ಶಕ್ತಿ ಯೋಜನೆಗಳಿಗೆ ಹಣ ಸುರಿಯುತ್ತಿರುವ ಚೀನಾ, ಮ್ಯಾನ್ಮಾರ್‌ನ ನೂತನ ಸರಕಾರದ ಮೇಲೂ ಪ್ರಭಾವ ಬೀರಲು ಯತ್ನಿಸುತ್ತಿದೆ.

ವಿದ್ಯುತ್ ಶಕ್ತಿಯ ರಫ್ತು ಪ್ರಕ್ರಿಯೆಯಲ್ಲಿ ಆಗುತ್ತಿರುವ ಬೆಳವಣಿಗೆಯು - ಪ್ರಾದೇಶಿಕ ಸಂಯೋಜನೆಯನ್ನು ಬಲಪಡಿಸುವ ಭಾರತ ಸರಕಾರದ ಹೊಸ ವಿದೇಶ ಕಾರ್ಯನೀತಿಗೆ ಪೂರಕವಾಗಿದೆ ಎಂದು ‘ಒಬ್ಸರ್ವರ್ ರಿಸರ್ಚ್ ಫೌಂಡೇಶನ್’ನ ಚಿಂತಕಿ ಜೊಯಿಟಾ ಭಟ್ಟಾಚಾರ್ಜಿ ತಿಳಿಸಿದ್ದಾರೆ.

 ನೇಪಾಳದಲ್ಲಿ ಭಾರತದ 57 ಬಿಲಿಯನ್ ರೂ. ವೆಚ್ಚದ ಜಲ ವಿದ್ಯುತ್ ಯೋಜನೆಗೆ ಭಾರತದ ಸಂಪುಟ ಕಳೆದ ತಿಂಗಳು ಅನುಮೋದನೆ ನೀಡಿತ್ತು. ಈ ಯೋಜನೆಯಂತೆ ವರ್ಷಕ್ಕೆ 900 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುವುದು ಮತ್ತು 25 ವರ್ಷಗಳ ಒಪ್ಪಂದದ ಅವಧಿಯಲ್ಲಿ ಇದರ ಶೇ.22ರಷ್ಟು ವಿದ್ಯುತ್ ನೇಪಾಳಕ್ಕೆ ಉಚಿತವಾಗಿ ದೊರೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X