ಇಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಮಂಗಳೂರು, ಮಾ.31: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಎ.1ರಂದು ಜಿಲ್ಲೆಯಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವರು.
ಬೆಳಗ್ಗೆ 10ಕ್ಕೆ ಬಿ.ಸಿ.ರೋಡ್ ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದಲ್ಲಿ ಎಸ್.ಯು.ಪಣಿಯಾಡಿ ಗ್ರಂಥಾಲಯ ಸಂಕೀರ್ಣದ ಲೋಕಾರ್ಪಣೆ ಸಮಾರಂಭ, 11ಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಭವನದಲ್ಲಿ ನಡೆಯುವ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ, ಅಪರಾಹ್ನ 2:30ಕ್ಕೆ ಬಂಟ್ವಾಳ ಐ.ಬಿ.ನಲ್ಲಿ ಬಿ.ಸಿ.ರೋಡ್ ಬಸ್ ನಿಲ್ದಾಣ ಮತ್ತು ರಸ್ತೆ ಅಗಲೀಕರಣದ ಕುರಿತು ಸಭೆ, ಸಂಜೆ 6ಕ್ಕೆ ಪಿಲಿಮೊಗರು ಶಾಲೆಯಲ್ಲಿ ಜರಗುವ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.
Next Story





