ಪ್ರಸವ ಪೂರ್ವ ಲಿಂಗ ಪತ್ತೆ ಕುರಿತು ಜಾಗೃತಿ
ಮಂಗಳೂರು, ಮಾ.31: ಜಿಲ್ಲೆಯ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆಯ ವಿರುದ್ಧ ಜಾಗೃತಿ ಕಾರ್ಯಕ್ರಮ ನಡೆಸಲು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಸವ ಪೂರ್ವ ಲಿಂಗ ನಿರ್ಣಯ ನಿರ್ಬಂಧ ಮತ್ತು ದುರ್ಬಳಕೆ ತಡೆ ಕಾಯ್ದೆಯ ದ.ಕ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆಯಲ್ಲಿ ನಿರ್ಧರಿಸಿತು.
ಸ್ಕ್ಯಾನಿಂಗ್ ಕೇಂದ್ರಗಳನ್ನು 3ತಿಂಗಳಿಗೊಮ್ಮೆ ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು. ಸ್ಕ್ಯಾನಿಂಗ್ ಯಂತ್ರವನ್ನು ನಿರ್ವಹಿಸುವ ವೈದ್ಯರ ಹೆಸರನ್ನು ಕಡ್ಡಾಯವಾಗಿ ನಮೂದಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸರಕಾರದ ಆದೇಶದಂತೆ ಪಿ.ಸಿ ಪಿ.ಎನ್.ಡಿ.ಟಿ. ಕಾಯ್ದೆಯ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷರಾಗಿ ಕೆ.ಎಸ್. ಹೆಗ್ಡೆ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕಿ ಡಾ. ರಶ್ಮಿಯವರನ್ನು ಆಯ್ಕೆ ಮಾಡಲಾಯಿತು. ಸಮಿತಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ. ಸಮಿತಿಯಲ್ಲಿ ಮಂಗಳೂರು ಒಬಿಜಿ ಸೊಸೈಟಿ ಅಧ್ಯಕ್ಷೆ ಡಾ. ಪ್ರೇಮಾ ಡಿಕುನ್ಹ, ಮಕ್ಕಳ ತಜ್ಞೆ ಡಾ.ರತಿಕಾ ಶೆಟ್ಟಿ, ಡಾ.ಸಿಕಂದರ್ ಪಾಷಾ, ವಾರ್ತಾಧಿಕಾರಿ ಖಾದರ್ ಶಾ ಸದಸ್ಯರಾಗಿರುತ್ತಾರೆ.







