ಕೋಡಿ ಬ್ಯಾರೀಸ್ ಬಿ.ಎಡ್ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ತರಬೇತಿ

ಕುಂದಾಪುರ, ಎ.1: ಕೋಡಿ ಬ್ಯಾರೀಸ್ ಬಿ.ಎಡ್ ಕಾಲೇಜಿನಲ್ಲಿ ಶುಕ್ರವಾರ ಪ್ರಥಮ ವರ್ಷದ ಬಿ.ಎಡ್ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ವೀರಣ್ಣ ಶೆಟ್ಟಿ ಶಿಕ್ಷಕ ವೃತ್ತಿ ಮತ್ತು ವೃತ್ತಿ ಮಾರ್ಗದರ್ಶನ ಕುರಿತು ಮಾತನಾಡಿ, ದೇಶದ ಭವಿಷ್ಯ ನಾಲ್ಕು ಗೋಡೆಗಳ ಮಧ್ಯೆ ಇದೆ. ಮಕ್ಕಳ ಶಿಕ್ಷಣ ಮತ್ತು ವ್ಯಕ್ತಿತ್ವದ ವಿಕಸನ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಹಾಜಿ ಮಾಸ್ಟರ್ ಮೆಹಮೂದ್ ಮಾತನಾಡಿ ಪ್ರಥಮ ವರ್ಷದ ಬಿ.ಎಡ್ ಪ್ರಶಿಕ್ಷಣಾರ್ಥಿಗಳಿಗೆ ಶುಭ ಹಾರೈಸಿದರು.
ಡಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಫಿರ್ದೌಸ್, ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಸಿದ್ದಪ್ಪ ಕೆ.ಎಸ್. ಉಪಸ್ಥಿತರಿದ್ದರು.
Next Story





