Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆ್ಯಂಟಿ ರೋಮಿಯೊ ದಳ ಯುವಕನ ತಲೆ ಬೋಳಿಸಿದ...

ಆ್ಯಂಟಿ ರೋಮಿಯೊ ದಳ ಯುವಕನ ತಲೆ ಬೋಳಿಸಿದ ವೀಡಿಯೊ ವೈರಲ್,ಮೂವರು ಪೊಲೀಸರ ಅಮಾನತು

ವಾರ್ತಾಭಾರತಿವಾರ್ತಾಭಾರತಿ1 April 2017 6:30 PM IST
share
ಆ್ಯಂಟಿ ರೋಮಿಯೊ ದಳ ಯುವಕನ ತಲೆ ಬೋಳಿಸಿದ ವೀಡಿಯೊ ವೈರಲ್,ಮೂವರು ಪೊಲೀಸರ ಅಮಾನತು

ಶಹಜಾನ್‌ಪುರ(ಉ.ಪ್ರ),ಎ.1: ಶಹಜಾನ್‌ಪುರದಲ್ಲಿ ಆ್ಯಂಟಿ ರೋಮಿಯೊ ದಳದ ಉಪಸ್ಥಿತಿಯಲ್ಲಿ ಯುವಕನೋರ್ವನ ತಲೆಯನ್ನು ಬೋಳಿಸುತ್ತಿರುವ ವೀಡಿಯೊ ವೈರಲ್ ಆಗಿದೆ. ‘ಅವನು ತಪ್ಪು ಮಾಡಿದ್ದಾನೆ,ಮತ್ತೊಮ್ಮೆ ಅದನ್ನು ಮಾಡುವುದಿಲ್ಲ ’ ಎಂದು ಧ್ವನಿಯೊಂದು ವೀಡಿಯೊದಲ್ಲಿ ಹೇಳುತ್ತಿದ್ದರೆ ತಲೆಯನ್ನು ಬೋಳಿಸುತ್ತಿರುವವರ ಕೈಗೆ ಒಪ್ಪಿಸಿ ಮಹಿಳೆಯನ್ನು ಚುಡಾಯಿಸಿದ ಆರೋಪ ಹೊತ್ತು ನೆಲದ ಮೇಲೆ ಕುಳಿತಿದ್ದ ಯುವಕ,‘ಇಲ್ಲ ಸರ್, ಮತ್ತೆ ಅಂತಹ ತಪ್ಪು ಮಾಡುವುದಿಲ್ಲ’ ಎಂದು ಅಲವತ್ತುಕೊಳ್ಳು ತ್ತಿರುವ ದೃಶ್ಯ ಈ ವೀಡಿಯೊದಲ್ಲಿದೆ.

ಮಾ.22ರಂದು ಚಿತ್ರೀಕರಿಸಲಾದ ಈ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರ ಆಕ್ರೋಶದ ನಡುವೆಯೇ ವೀಡಿಯೊದಲ್ಲಿರುವ ಮೂವರು ಪೊಲಿಸರನ್ನು ಅಮಾನತುಗೊಳಿಸಲಾಗಿದ್ದು, ಅವರ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.

ಯುವಜೋಡಿಯೊಂದು ಸಾರ್ವಜನಿಕ ಸ್ಥಳದಲ್ಲಿ ಕುಳಿತುಕೊಂಡಿದ್ದು, ಯುವಕನ ತಲೆಯನ್ನು ಬೋಳಿಸುವಂತೆ ಕೆಲವು ಸ್ಥಳೀಯರು ಆದೇಶಿಸಿದ್ದರು. ಆ್ಯಂಟಿ ರೋಮಿಯೊ ದಳದ ಪೊಲೀಸರಾದ ಸುಹೈಲ್,ಲಾಯಿಕ್ ಮತ್ತು ಸೋನು ಸ್ಥಳದಲ್ಲಿ ಉಪಸ್ಥಿತ ರಿದ್ದರಾದರೂ ಗುಂಪನ್ನು ತಡೆಯುವ ಗೋಜಿಗೆ ಹೋಗಿರಲಿಲ್ಲ. ವಿಷಯವನ್ನು ಸ್ಥಳೀಯ ಠಾಣಾಧಿಕಾರಿಯ ಗಮನಕ್ಕೆ ತರಲಾಗಿತ್ತಾದರೂ ಅವರೂ ಯಾವದೇ ಕ್ರಮ ಕೈಗೊಳ್ಳುವ ಗೋಜಿಗೆ ಹೋಗಿರಲಿಲ್ಲ ಎಂದು ಅಧಿಕಾರಿಯೋರ್ವರು ತಿಳಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಪುರುಷರಿಂದ ಕಿರುಕುಳ,ಚುಡಾವಣೆಗಳನು ತಡೆಯಲೆಂದು ಮುಖ್ಯಮಂತ್ರಿ ಆದಿತ್ಯನಾಥ್ ಅವರ ಆದೇಶದ ಮೇರೆಗೆ ಆ್ಯಂಟಿ ರೋಮಿಯೊ ದಳವು ಅಸ್ತಿತ್ವಕ್ಕೆ ಬಂದಿದೆ. ಆದರೆ ದಳದ ಸಿಬ್ಬಂದಿಗಳು ದೌರ್ಜನ್ಯಗಳನ್ನು ನಡೆಸುತ್ತ ಕಿರುಕುಳ ನೀಡುತ್ತಿರುವ ಬಗ್ಗೆ ಹಲವಾರು ದೂರುಗಳು ಕೇಳಿಬಂದಿವೆ. ಹಲವಾರು ಯುವಕರಿಗೆ ಬೈಠಕ್ ತೆಗೆಯುವಂತಹ ಶಿಕ್ಷೆಗಳನ್ನು ನೀಡಿ ಪೊಲೀಸರು ಆನಂದಿಸುತ್ತಿದ್ದಾರೆ. ರಾಮಪುರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್‌ನೋರ್ವ ಸೋದರ ಸಂಬಂಧಿಗಳನ್ನು ಹಿಡಿದು ಅವರನ್ನು ಬಿಡುಗಡೆಗೊಳಿಸಲು ಲಂಚ ಕೇಳುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ದೂರುಗಳ ಹಿನ್ನಲೆಯಲ್ಲಿ ಡಿಜಿಪಿ ಜಾವೀದ್ ಅಹ್ಮದ್ ಅವರು ಯಾರಿಗೂ ವಿನಾಕಾರಣ ಕಿರುಕುಳ ನೀಡದಂತೆ ಮತ್ತು ತಲೆ ಬೋಳಿಸುವ, ಮುಖಕ್ಕೆ ಮಸಿ ಬಳಿಯುವಂತಹ ಕೃತ್ಯಗಳನ್ನು ನಡೆಸದಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ. ಜೋಡಿಗಳಿಗೆ ತೊಂದರೆ ಮತ್ತು ನೈತಿಕ ಪೊಲೀಸಗಿರಿಯ ವಿರುದ್ಧ ಆದಿತ್ಯನಾಥ ಅವರೂ ಆ್ಯಂಟಿ ರೋಮಿಯೊ ದಳಗಳಿಗೆ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X