ಮೀನು ಸಾರು ಸೇವಿಸಿ 400 ಸಿಆರ್‌ಪಿಎಫ್ ಯೋಧರು ಅಸ್ವಸ್ಥ

ತಿರುವನಂತಪುರ, ಎ.2: ಇಲ್ಲಿನ ಪಳ್ಳಿಪುರಂನ ಸಿಆರ್‌ಪಿಎಫ್ ಶಿಬಿರದಲ್ಲಿದ್ದ ಕನಿಷ್ಠ 400 ಸೈನಿಕರು ಶಂಕಿತ ವಿಷಾಹಾರ ಸೇವನೆಯಿಂದಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಆಹಾರ ಸೇವಿಸಿದ ಬಳಿಕ ಭೇದಿ ಹಾಗೂ ವಾಂತಿಯಿಂದ ಬಳಲುತ್ತಿದ್ದ ಯೋಧರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸೈನಿಕರು ಮೀನು ಸಾರು ಸೇವಿಸಿದ ಬಳಿಕ ಅನಾರೋಗ್ಯಕ್ಕೀಡಾದರು ಎಂದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ.
109 ಯೋಧರು ತ್ರಿವಂಡ್ರಮ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದು, ರಾಜ್ಯ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ಕಳೆದ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಯೋಧರ ಆರೋಗ್ಯವನ್ನು ವಿಚಾರಿಸಿದ್ದಾರೆ.
Next Story





