ಶಿವಕುಮಾರ ಸ್ವಾಮೀಜಿಯನ್ನು ಭೇಟಿಯಾದ ಸಿದ್ದರಾಮಯ್ಯ

ತುಮಕೂರು, ಎ.2: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧ್ದಗಂಗಾ ಮಠದಲ್ಲಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರನ್ನು ಭೇಟಿ ಮಾಡಿ ಹುಟ್ಟುಹಬ್ಬಕ್ಕೆ ಶುಭ ಕೋರಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ 110ನೆ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಅವರಿಗೆ ಶುಭಾಶಯ ಕೋರಲು ಬಂದಿದ್ದೇವೆ ಎಂದರು. ಸಿದ್ಧಗಂಗಾ ಸ್ವಾಮೀಜಿಯವರಿಗೆ ಭಾರತರತ್ನ ನೀಡುವಂತೆ ಈಗಾಗಲೇ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು. ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವದ ಪೈಕಿ ಮುಂಗಾರಿನ ಹಣ ಮಾತ್ರ ಬಿಡುಗಡೆಯಾಗಿದೆ. ಪ್ರವಾಹ ಹಾಗೂ ಹಿಂಗಾರಿನ ಹಣ ಇನ್ನೂ ಬಿಡುಗಡೆಯಾಗಿಲ್ಲ ಎಂದರು.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಗೃಹಸಚಿವ ಡಾ.ಜಿ.ಪರಮೇಶ್ವರ್, ಎಸ್.ಪಿ.ಮುದ್ದಹನುಮೇಗೌಡ, ಶಾಸಕ ಡಾ.ಎಸ್.ರಫೀಕ್ ಅಹ್ಮದ್, ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್, ಸಿಇಒ ಕೆ.ಜಿ.ಶಾಂತಾರಾಮ ಮತ್ತಿತರರು ಹಾಜರಿದ್ದರು
Next Story





