ಪೋಲಿಯೊ ಹನಿ ತಪ್ಪದೇ ಹಾಕಿಸಿ: ಮೀನಾಕ್ಷಿ ಮಾಧವ

ಉಡುಪಿ, ಎ.2: ಎಲ್ಲಾ ತಾಯಂದಿರು ತಮ್ಮ ಮಕ್ಕಳಿಗೆ ವರ್ಷದಲ್ಲಿ ಎರಡು ಬಾರಿ ಪೋಲಿಯೊ ಹನಿಯನ್ನು ತಪ್ಪದೇ ಹಾಕಿಸುವಂತೆ ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ತಿಳಿಸಿದ್ದಾರೆ.
ಅವರು ರವಿವಾರ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನಿಸ್ ಮಾತನಾಡಿ, ದೇಶದಲ್ಲಿ 2011ರ ನಂತರ ಪೋಲಿಯೊ ಪ್ರಕರಣಗಳು ಕಂಡು ಬಂದಿಲ್ಲ, ಆದರೂ ನಮ್ಮ ನೆರೆಯ ದೇಶಗಳಲ್ಲಿ ಪೊಲಿಯೊ ಪ್ರಕರಣಗಳು ಕಂಡು ಬಂದಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ಪೋಲಿಯೊ ನೀಡಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ತಿಳಿಸಿದರು.
ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ.ಮಧುಸೂಧನ್ ನಾಯ್ಕ, ಆರ್.ಸಿ.ಎಚ್. ಅಧಿಕಾರಿ ಡಾ.ರಾಮ, ರೋಟರಿ ಅಧ್ಯಕ್ಷ ಡಾ.ಸುರೇಶ್ ಶೆಣೈ, ಕಾರ್ಯದರ್ಶಿ ರಾಮಚಂದ್ರ ಉಪಾಧ್ಯಾಯ, ರೋಟರಿಯ ಲಸಿಕಾ ಕಾರ್ಯಕ್ರಮದ ಉಸ್ತುವಾರಿ ಜಯಚಂದ್ರ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕಿಶೋರಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ವಂದಿಸಿದರು.





