ಚಾಮರಾಜನಗರ ಜಿಲ್ಲೆಗೆ ಬಂದರೆ ಅಧಿಕಾರ ಕೈತಪ್ಪುತ್ತದೆ ಎಂಬ ಮೂಢನಂಬಿಕೆ ನನಗಿಲ್ಲ: ಸಿಎಂ

ಚಾಮರಾಮನಗರ, ಎ.3: "ಚಾಮರಾಜನಗರ ಜಿಲ್ಲೆಗೆ ಬಂದರೆ ಅಧಿಕಾರ ಕೈತಪ್ಪುತ್ತದೆ ಎಂಬ ಮೂಢನಂಬಿಕೆ ನನಗಿಲ್ಲ ಈ ಜಿಲ್ಲೆಗೆ ಬಂದ ಮೇಲೆ ನನ್ನ ಶಕ್ತಿ ಹೆಚ್ಚಾಗಿದೆ. ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ಭೇಟಿ ನೀಡದ ಬಿಎಸ್ ಯಡಿಯೂರಪ್ಪ ಅರ್ಧದಲ್ಲೆ ಅಧಿಕಾರ ಕಳೆದುಕೊಂಡರು. ಅವರಿಗೆ ಈ ಜಿಲ್ಲೆಯಲ್ಲಿ ಪ್ರಚಾರ ನಡೆಸುವ ನೈತಿಕತೆಯಿಲ್ಲ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಗುಂಡ್ಲುಪೇಟೆ ಉಪ ಚುನಾವಣೆ ಪ್ರಚಾರದಲ್ಲಿರುವ ಸಿದ್ದರಾಮಯ್ಯ ಚಿಕ್ಕಾಟಿ ಗ್ರಾಮದಲ್ಲಿ ಮತದಾರರನ್ನು ಉದ್ದೇಶಿಸಿ ಸೋಮವಾರ ಮಾತನಾಡಿದರು.
"ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪಗೆ ಮೆದುಳೇ ಇಲ್ಲ. ಯಡಿಯೂರಪ್ಪ ಹಾಗೂ ಈಶ್ವರಪ್ಪರ ನಡುವೆ ಮುಸುಕಿನ ಗುದ್ದಾಟ ಈಗಲೂ ಮುಂದುವರಿದಿದೆ'' ಎಂದು ಸಿಎಂ ಹೇಳಿದ್ದಾರೆ.
Next Story





