ಬೈಕ್ ಢಿಕ್ಕಿ: ಕೂಲಿ ಕಾರ್ಮಿಕ ಮೃತ್ಯು

ಬೆಂಗಳೂರು, ಎ.3: ಶರ ವೇಗವಾಗಿ ಬಂದ ಬೈಕ್‌ಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಬಾಣಸವಾಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಕೂಲಿ ಕಾರ್ಮಿಕನನ್ನು ಕೋಲಾರ ಜಿಲ್ಲೆಯ ಕೆಜಿಎಫ್ ಮೂಲದ ಉದಯ ನಗರದ ಧನಶೇಖರನ್ (48) ಎಂದು ಗುರುತಿಸಿದ್ದು, ಇದೇ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಬೈಕ್ ಸವಾರ ಮುಹಮ್ಮದ್ ಜುನೈದ್‌ನನ್ನು ನಗರದ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಬಾಣಸವಾಡಿ ಮಾರ್ಗದಿಂದ ಬೈಕ್‌ನಲ್ಲಿ ರವಿವಾರ ರಾತ್ರಿ 7:45ರ ಸುಮಾರಿಗೆ ಬರುತ್ತಿದ್ದ ಜುನೈದ್ ಮಾರ್ಗಮಧ್ಯೆ ಲಿಂಗರಾಜಪುರ ಮೇಲ್ಸೇತುವೆ ರಸ್ತೆಯಲ್ಲಿ ಅಡ್ಡಬಂದ ಧನಶೇಖರ್‌ಗೆ ಢಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ. ಢಿಕ್ಕಿಯ ರಭಸಕ್ಕೆ ಧನಶೇಖರ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಈ ಸಂಬಂಧ ಬಾಣಸವಾಡಿ ಸಂಚಾರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story





