Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕುಡಿಯುವ ನೀರಿಗೆ ಇನ್ನೂ 200 ಕೋಟಿ ರೂ....

ಕುಡಿಯುವ ನೀರಿಗೆ ಇನ್ನೂ 200 ಕೋಟಿ ರೂ. ಶೀಘ್ರ ಬಿಡುಗಡೆ: ಕಾನೂನು ಸಚಿವ ಜಯಚಂದ್ರ

‘ರೈತರಿಗೆ ಇನ್ನು ಹತ್ತು ದಿನಗಳಲ್ಲಿ ಬೆಳೆ ನಷ್ಟ ಪರಿಹಾರ’

ವಾರ್ತಾಭಾರತಿವಾರ್ತಾಭಾರತಿ3 April 2017 7:39 PM IST
share
ಕುಡಿಯುವ ನೀರಿಗೆ ಇನ್ನೂ 200 ಕೋಟಿ ರೂ. ಶೀಘ್ರ ಬಿಡುಗಡೆ: ಕಾನೂನು ಸಚಿವ ಜಯಚಂದ್ರ

ಬೆಂಗಳೂರು, ಎ. 3: ರಾಜ್ಯದಲ್ಲಿ ಭೀಕರ ಸ್ವರೂಪದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರು ಪೂರೈಕೆ ಇನ್ನೂ 200ಕೋಟಿ ರೂ.ಗಳಷ್ಟು ಅಗತ್ಯವಿದ್ದು, ಶೀಘ್ರದಲ್ಲೆ ಹಣ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ರಾಜ್ಯದ 1,145 ಗ್ರಾಮಗಳಿಗೆ 1,737 ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. 614 ಖಾಸಗಿ ಕೊಳವೆಬಾವಿಗಳನ್ನು ಸರಕಾರದ ವಶಕ್ಕೆ ಪಡೆದಿದ್ದು, ಆ ನೀರನ್ನು ಜನರಿಗೆ ನೀಡಲಾಗುತ್ತಿದೆ ಎಂದರು.

ಹೊರ ರಾಜ್ಯಗಳಿಂದ ಮೇವು ಖರೀದಿ : ಜಾನುವಾರುಗಳಿಗೆ ಮೇವಿನ ಕೊರತೆ ಇದ್ದು, ಆಂಧ್ರ ಮತ್ತು ಪಂಜಾಬ್‌ನಿಂದ ಮೇವು ಖರೀದಿಗೆ ಟೆಂಡರ್ ಕರೆಯಲಾಗಿದೆ. ರಾಜ್ಯದ 31ತಾಲೂಕುಗಳಲ್ಲಿ ಒಟ್ಟು 81ಗೋಶಾಲೆಗಳನ್ನು ಆರಂಭಿಸಲಾಗಿದೆ. ಅಲ್ಲದೆ, ಬರ ಪೀಡಿತ ಪ್ರದೇಶಗಳಲ್ಲಿ 339 ಮೇವು ಬ್ಯಾಂಕ್ ಸ್ಥಾಪಿಸಿದ್ದು, ಸಬ್ಸಿಡಿ ದರದಲ್ಲಿ ಮೇವು ಪೂರೈಕೆ ಮಾಡಲಾಗುತ್ತಿದೆ ಎಂದರು.

ರೈತರಿಗೆ ಪರಿಹಾರ: ಬರ ಪರಿಹಾರ ಕಾರ್ಯಕ್ಕೆ 4,702 ಕೋಟಿ ರೂ.ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಕೇಂದ್ರ ಈವರೆಗೂ ಒಟ್ಟು 1,685 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಈಗಾಗಲೇ ಮೊದಲ ಕಂತಿನಲ್ಲಿ ಕೇಂದ್ರ ಬಿಡುಗಡೆ ಮಾಡಿದ್ದ 450ಕೋಟಿ ರೂ.ಗಳಿಗೆ ರಾಜ್ಯ ಸರಕಾರ 221ಕೋಟಿ ರೂ.ಸೇರಿಸಿ ಒಟ್ಟು 671.20ಕೋಟಿ ರೂ.ಗಳನ್ನು 1.20ಲಕ್ಷಕ್ಕೂ ಅಧಿಕ ಮಂದಿ ರೈತರಿಗೆ ನೀಡಲಾಗಿದೆ.

ಇದೀಗ ಕೇಂದ್ರ ಬಿಡುಗಡೆ ಮಾಡಿರುವ 1,235 ಕೋಟಿ ರೂ.ಗಳನ್ನು ಉಳಿದ 10 ಲಕ್ಷಕ್ಕೂ ಅಧಿಕ ಮಂದಿ ರೈತರಿಗೆ ಶೀಘ್ರದಲ್ಲೆ ಇನ್‌ಪುಟ್ ಸಬ್ಸಿಡಿ ರೂಪದಲ್ಲಿ ಬಿಡುಗಡೆ ಮಾಡಲು ರೈತರ ಬ್ಯಾಂಕ್ ಖಾತೆಗಳನ್ನು ಆಧಾರ್ ಸಂಖ್ಯೆಗೆ ಜೋಡಣೆ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಇನ್ನೂ ಹತ್ತು ದಿನಗಳ ಒಳಗಾಗಿ ರೈತರ ಖಾತೆಗೆ ಹಣ ರವಾನಿಸಲಾಗುವುದು ಎಂದರು.

ಬೆಳೆ ನಷ್ಟಕ್ಕೆ ಒಣ ಭೂಮಿ ಹೆಕ್ಟೆರ್‌ಗೆ-6,800 ರೂ. ಮಳೆಯಾಶ್ರಿತ ಪ್ರತಿ ಹೆಕ್ಟೆರ್‌ಗೆ -13,500 ರೂ. ಹಾಗೂ ನೀರಾವರಿ ಪ್ರತಿ ಹೆಕ್ಟೆರ್‌ಗೆ-18 ಸಾವಿರ ರೂ.ನಿಗದಿ ಮಾಡಲಾಗಿದೆ ಎಂದ ಅವರು, ಬರ ಪರಿಸ್ಥಿತಿ ಎದುರಿಸಲು ರಾಜ್ಯ ಸರಕಾರ ಸರ್ವ ಸನ್ನದ್ಧವಾಗಿದೆ. ಆದರೆ, ತೀವ್ರ ಸ್ವರೂಪದ ಅಂತರ್ಜಲ ಕುಸಿತದಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಸಮರ್ಪಕ ರೀತಿಯಲ್ಲಿ ನೀರು ಪೂರೈಕೆ ಆಗುತ್ತಿಲ್ಲ ಎಂದರು.

‘ಕೇಂದ್ರ ಸರಕಾರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬೆಳೆ ನಷ್ಟಕ್ಕೆ ಪರಿಹಾರ ನೀಡಿದೆ. ಆದರೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆಗೆ ಹಣವನ್ನೇ ನೀಡಿಲ್ಲ. ಹೀಗಾಗಿ ಮುಖ್ಯಮಂತ್ರಿಗಳ ಮೂಲಕ ಮತ್ತೊಮ್ಮೆ ಕೇಂದ್ರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲು ಉದ್ದೇಶಿಸಿಲಾಗಿದೆ’

-ಟಿ.ಬಿ.ಜಯಚಂದ್ರ ಕಾನೂನು ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X