ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿ: ಅರ್ಜಿ ಅಹ್ವಾನ
ಮಂಗಳೂರು, ಎ.3: ಕಲೆ, ಸಾಂಸ್ಕೃತಿಕ ಸಹಿತ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ರಾಷ್ಟ್ರಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜ ಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೋಗ್ಯವಾದ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಯನ್ನು ಭಾರತ ಸರಕಾರ ನೀಡುತ್ತದೆ.
ಭಾರತದಲ್ಲಿ ನೆಲೆಸಿರುವ 5 ರಿಂದ 18 ವರ್ಷದೊಳಗಿನ (1999ರ ಆ.1 ಮತ್ತು ಅದರ ನಂತರ ಜನಿಸಿದ ಮಕ್ಕಳನ್ನು 2017ನೆ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಪ್ರಶಸ್ತಿಯು 1 ಚಿನ್ನದ ಪದಕ, 20,000 ರೂ. ನಗದು ಮತ್ತು 10,000 ರೂ. ಮೌಲ್ಯದ ಪುಸ್ತಕ ವೋಚರ್, ಪ್ರಶಸ್ತಿ ಪತ್ರ ಹಾಗೂ 35 ಬೆಳ್ಳಿ ಪದಕ (ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ 1ಬೆಳ್ಳಿ ಪದಕ) 10,000 ರೂ. ನಗದು ಮತ್ತು 3,000 ರೂ. ಮೌಲ್ಯದ ಪುಸ್ತಕ ವೋಚರ್ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಅರ್ಜಿಯನ್ನು ಜಿಲ್ಲಾ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಪಂ ಕಟ್ಟಡ ಉರ್ವಸ್ಟೋರ್ ಅಶೋಕ ನಗರ ಇಲ್ಲಿಂದ ಪಡೆದು, ಆಂಗ್ಲ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ಭರ್ತಿ ಮಾಡಿ ಮೇ 30ರೊಳಗೆ ಸಲ್ಲಿಸಬೇಕು. ಮಾಹಿತಿಗಾಗಿ ದೂ.ಸಂ: 0824-2451254, 2453071ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.





