ಅಪಘಾತದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಸಾವು
ಉಳ್ಳಾಲ: ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆಟೋ ಚಾಲಕ ಕೆ.ಸಿ.ರೋಡ್ ನಿವಾಸಿ ಶೇಖ್ ಮೊದಿನ್(65)ಚಿಕಿತ್ಸೆ ಫಲಕಾರಿಯಾಗದೆ ಮವಾರ ಮೃತಪಟ್ಟಿದ್ದಾರೆ.
ಎ. 1ರಂದು ಕೋಟೆಕಾರು ಪೆಟ್ರೋಲ್ ಪಂಪ್ ಬಳಿ ತನ್ನ ಆಟೋ ರಿಕ್ಷಾಕ್ಕೆ ಪೆಟ್ರೋಲ್ ಹಾಕಿಸಿ ಅಲ್ಲಿಂದ ಆಟೋ ರಿಕ್ಷಾ ಪಾರ್ಕ್‌ಗೆ ತೆರಳುತ್ತಿದ್ದ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮಾರುತಿ ಒಮ್ನಿ ಕಾರು ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೊಯ್ದಿನ್ ಅವರ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಧ್ಯಾಹ್ನ ಸಾವನ್ನಪ್ಪಿದ್ದಾರೆ. ಮೃತರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರು ಇದ್ದಾರೆ.
Next Story





