ಅತ್ಯಾಚಾರಕ್ಕೊಳಗಾದ ವೃದ್ಧೆಯ ಆತ್ಮಹತ್ಯೆ: ಆರೋಪಿಯ ಬಂಧನ
ಕಣ್ಣೂರ್(ಕೇರಳ), ಎ. 4: ಆರಳಂ ಎಂಬಲ್ಲಿ ಅತ್ಯಾಚಾರಕ್ಕೊಳಗಾದ ವೃದ್ಧೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಆರೋಪಿ ಯನ್ನು ಪೊಲೀಸರು ಬಂಧಿಸಿದ್ದಾರೆ. ಆರಳಂ ನಿವಾಸಿ ರಾಜೀವ್ ಪೊಲೀಸರಿಂದ ಬಂಧಿಸಲ್ಪಟ್ಟ ಆರೋಪಿಯಾಗಿದ್ದು, ಇಂದು ಆತನನ್ನು ಕೋರ್ಟಿಗೆ ಹಾಜರು ಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಾರ್ಚ್30ರಂದು ಆರೋಪಿ ವೃದ್ಧೆಯನ್ನು ಅತ್ಯಾಚಾರ ಮಾಡಿದ್ದನು. ನಂತರ ವೃದ್ಧೆ ಆತ್ಮ ಹತ್ಯೆ ಮಾಡಿಕೊಂಡಿದ್ದರು. ವೃದ್ಧೆಯ ಮೃತದೇಹದ ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರಕ್ಕೀಡಾಗಿರುವುದು ಕಂಡು ಬಂದಿತ್ತು. ನಂತರ ಶಂಕಿತರನ್ನು ಕಸ್ಟಡಿಗೆ ಪಡೆದು ಪ್ರಶ್ನಿಸಿದಾಗ ಆರೋಪಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story