ವಿವಿಧ ಸಂಘಟನೆಗಳಿಂದ ಖಂಡನೆ
ಜಿಲ್ಲಾಧಿಕಾರಿ ಮೇಲೆ ಹಲ್ಲೆ ಪ್ರಕರಣ
ಉಡುಪಿ, ಎ.4: ಜಿಲ್ಲೆಯಲ್ಲಿ ವ್ಯಾಪಕವಾಗಿರುವ ಅಕ್ರಮ ಮರಳುಗಾರಿಕೆ ವಿರುದ್ಧ ಕ್ರಮಕ್ಕೆ ಮುಂದಾದ ಉಡುಪಿ ಜಿಲ್ಲಾಧಿಕಾರಿ, ಕುಂದಾಪುರ ಉಪವಿಭಾಗಾಧಿಕಾರಿ ಹಾಗೂ ಅಂಪಾರು ಗ್ರಾಮ ಕರಣಿಕರ ಮೇಲೆ ನಡೆದ ಹಲ್ಲೆಯನ್ನು ಸಿಪಿಐ (ಎಂ) ಉಡುಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.
ಹಿಂದೆ ಬಳ್ಳಾರಿ ಜಿಲ್ಲೆಯ ಗಣಿ ಮಾಫಿಯಾದಂತೆ ಕರಾವಳಿ ಜಿಲ್ಲೆಗಳಲ್ಲಿ ಮರಳು ಮಾಫಿಯಾ ಬೆಳೆಯುತ್ತಿದೆ. ಇದನ್ನು ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಸರಕಾರದ ಗಮನಕ್ಕೂ ತರಲಾಗಿತ್ತು. ಕರಾವಳಿ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ತರುವ ಭರವಸೆ ನೀಡಲಾಗಿದ್ದರೂ ಈವರೆಗೆ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಜಿಲ್ಲೆಯಲ್ಲಿ ಎರಡು ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದಾರೆ ಎಂದು ಜನ ಮಾತಾಡಿ ಕೊಳ್ಳುತಿದ್ದಾರೆ ಎಂದು ಸಮಿತಿ ಹೇಳಿದೆ.
ಅಕ್ರಮ ಮರಳುಗಾರಿಕೆ ಕಡಿವಾಣ ಹಾಕಲು ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ಸಿಪಿಎಂ ಆಗ್ರಹಿಸಿದೆ.
n
ಸ್ನೇಹ ಸಂಗಮ ಈಶ್ವರ ನಗರ, ಮಣಿಪಾಲವು ಕುಂದಾಪುರದ ಕಂಡಲೂರ್‌ನಲ್ಲಿ ಜಿಲ್ಲಾಧಿಕಾರಿ ಮೇಲೆ ನಡೆದ ಹಲ್ಲೆಯನ್ನು ಖಂಡಿಸುತ್ತದೆ ಮತ್ತು ಜಿಲ್ಲೆಯಲ್ಲಿ ಕೃತಕ ಮರಳು ಕ್ಷಾಮವನ್ನು ಉಂಟು ಮಾಡಿ ಬೆಳೆಯುತ್ತಿರುವ ಮರುಳು ಮಾಫಿಯಾವನ್ನು ಮಟ್ಟ ಹಾಕುವಲ್ಲಿ ಜಿಲ್ಲಾಧಿಕಾರಿಯವರು ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಸ್ನೇಹ ಸಂಗಮ ಸಂಘಟನೆಯು ನೈತಿಕವಾದ ಬೆಂಬಲ ನೀಡುತ್ತದೆ. ಸರಕಾರವು ಕೂಡಲೇ ತಪ್ಪಿತಸ್ಥರನ್ನು ಮತ್ತು ತೆರೆಯ ಹಿಂದೆ ಇರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಭಾವಶಾಲಿಗಳನ್ನು ಕೂಡ ಬಂಧಿಸಿ ಕ್ರಮ ಕೈಗೊಳ್ಳಬೇಕು. ಮಹೇಶ್ ಠಾಕೂರ್, ಸ್ನೇಹ ಸಂಗಮ ಈಶ್ವರ ನಗರ, ಮಣಿಪಾಲ
n







