ಪ್ರತಿಭಟನಕಾರರ ಬಂಧನ ಪ್ರಕರಣ: 68 ಮಂದಿ ಬಿಡುಗಡೆ

ಮಂಗಳೂರು, ಎ. 5: ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಒಂದು ಕಿಡ್ನಿಯನ್ನು ಕಳೆದುಕೊಂಡಿರುವ ಅಹ್ಮದ್ ಖುರೇಶಿಗೆ ನ್ಯಾಯ ಒದಗಿಸುವಂತೆ ಹಾಗೂ ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಮಿಷನರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾದ ಕಾರ್ಯಕರ್ತರಲ್ಲಿ 68 ಮಂದಿಯನ್ನು ಮಂಗಳವಾರ ರಾತ್ರಿ ಬಿಡುಗಡೆಗೊಳಿಸಲಾಗಿದೆ.ಪ್ರತಿಭಟನನಿರತರಾಗಿದ್ದ 90ಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ನಗರ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ಪ್ರತಿಭಟನಕಾರರನ್ನು ರಾತ್ರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ 68 ಮಂದಿಯನ್ನು ಬಿಡುಗಡೆಗೊಳಿಸಲಾಗಿದೆ.
Next Story





