ಉ.ಪ್ರದೇಶದಲ್ಲಿ ಬಿಜೆಪಿ ನಾಯಕ ಗುಂಡಿಗೆ ಬಲಿ

ಮುಝಫರ್‌ನಗರ,ಎ.5: ಜಿಲ್ಲೆಯ ಖಟೋಲಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಬೈಕಿನಲ್ಲಿ ಬಂದಿದ್ದ ಮೂವರು ಅಪರಿಚಿತ ವ್ಯಕ್ತಿಗಳು ಬಿಜೆಪಿ ನಾಯಕನೋರ್ವನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಮಾಜಿ ಖಟೋಲಿ ನಗರ ಬಿಜೆಪಿ ಕಾರ್ಯದರ್ಶಿ ರಾಜಾ ಬಾಲ್ಮೀಕಿ ಅವರು ತನ್ನ ಅಂಗಡಿಯಲ್ಲಿ ಕುಳಿತಿದ್ದ ಸಮಯ ಹಂತಕರು ಅವರನ್ನು ಬಲಿ ತೆಗೆದುಕೊಂಡಿದ್ದಾರೆ.
ಬಾಲ್ಮೀಕಿ ಹತ್ಯೆಯನ್ನು ವಿರೋಧಿಸಿ ಪ್ರತಿಭಟನೆಗಿಳಿದ ಆಕ್ರೋಶಿತ ಜನರು ದಿಲ್ಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತಡೆಯೊಡ್ಡಿ ದ್ದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
Next Story





