ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಟ್ರಸ್ಟಿಯಾಗಿ ನೇಮಕ

ಮಂಗಳೂರಿನ ನಿವಾಸಿ ಅಭಿಲಾಶ್ ಪಿ.ವಿ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಟ್ರಸ್ಟಿಯಾಗಿ ನೇಮಕಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಈ ದೇವಸ್ಥಾನ ದತ್ತಿ ಇಲಾಖೆಗೊಳಪಟ್ಟಿದೆ. ಅವರು ಕರ್ನಾಟಕ ಆರೋಗ್ಯ ವಿಶ್ವವಿದ್ಯಾನಿಲಯದಲ್ಲಿ ಆಡಳಿತ ಮಂಡಳಿ ಸದಸ್ಯರಾಗಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅವರು ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ಫಿಸಿಯೊಥೆರಪಿಯ ಸಹ ಪ್ರಾಧ್ಯಾಪಕರಾಗಿ ಹಾಗೂ ಎ.ಜೆ.ಸಮೂಹ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Next Story





