ರುದ್ರಭೂಮಿಗಾಗಿ ಪುರಸಭೆ ಕಚೇರಿಯಲ್ಲಿ ಶವ ಇಟ್ಟು ಪ್ರತಿಭಟನೆ
.jpg)
ಗದಗ, ಎ.5: ಗ್ರಾಮದಲ್ಲಿ ಈ ತನಕ ರುದ್ರಭೂಮಿ ವ್ಯವಸ್ಥೆ ಮಾಡದ ಕಾರಣ ಪುರಸಭೆ ಅಧಿಕಾರಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ ಘಟನೆ ನಡೆದಿದೆ.
ಗದಗ ಜಿಲ್ಲೆ ರೋಣ ತಾಲೂಕಿನ ಗಜೇಂದ್ರಗಡ ಪಟ್ಟಣದ ಪುರಸಭೆ ವ್ಯಾಪ್ತಿಯ 23ನೇ ವಾರ್ಡ್ ನ ಉಣಚಗೇರಿ ಗ್ರಾಮದ ಸುಂದರ ಕಲಾಲ (55) ವ್ಯಕ್ತಿಯು ನಿನ್ನೆ ರಾತ್ರಿ ಮೃತಪಟ್ಟಿದ್ದು, ಶವಸಂಸ್ಕಾರ ಮಾಡಲು ಪುರಸಭೆ ಈ ತನಕ ರುದ್ರಭೂಮಿಯ ವ್ಯವಸ್ಥೆ ಮಾಡಿಕೊಡದ ಕಾರಣ, ಶವವನ್ನು ಪುರಸಭೆಯಲ್ಲಿಯೇ ಇಟ್ಟು ಗ್ರಾಮಸ್ಥರು ಪ್ರತಿಭಟಿಸಿದರು.
ಶವ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿ ಕೊಡುವವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಸ್ಥಳಕ್ಕೆ ಎಸಿ, ಡಿಸಿ ಆಗಮಿಸಿ ಇದಕ್ಕೊಂದು ಶಾಶ್ವತ ಪರಿಹಾರ ಒದಗಿಸಿಕೊಡಬೇಕೆಂದು ಪಟ್ಟು ಹಿಡಿದ್ದಾರೆ.
Next Story





