Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದಲಾಯಿ ಲಾಮಾ ಅರುಣಾಚಲ ಭೇಟಿಗೆ ಚೀನಾ...

ದಲಾಯಿ ಲಾಮಾ ಅರುಣಾಚಲ ಭೇಟಿಗೆ ಚೀನಾ ಆಕ್ರೋಶ

ಭಾರತ-ಚೀನಾ ಸಂಬಂಧಕ್ಕೆ ತೀವ್ರ ಧಕ್ಕೆ

ವಾರ್ತಾಭಾರತಿವಾರ್ತಾಭಾರತಿ5 April 2017 7:54 PM IST
share
ದಲಾಯಿ ಲಾಮಾ ಅರುಣಾಚಲ ಭೇಟಿಗೆ ಚೀನಾ ಆಕ್ರೋಶ

ಬೀಜಿಂಗ್, ಎ. 5: ಟಿಬೆಟ್‌ನ ಆಧ್ಯಾತ್ಮಿಕ ನಾಯಕ ದಲಾಯಿ ಲಾಮಾರ ಅರುಣಾಚಲಪ್ರದೇಶ ಭೇಟಿಯು ಭಾರತ-ಚೀನಾ ಸಂಬಂಧಕ್ಕೆ ತೀವ್ರ ಧಕ್ಕೆ ತಂದಿದೆ ಎಂದು ಚೀನಾ ಹೇಳಿದೆ.
ಚೀನಾ ವಿದೇಶ ಸಚಿವಾಲಯವು ಹೇಳಿಕೆಯೊಂದರಲ್ಲಿ ತನ್ನ ಆಕ್ರೋಶವನ್ನು ವ್ಯಕ್ತಪಡಿಸಿದೆ.

 ಇದಕ್ಕೂ ಮುನ್ನ ಚೀನಾದ ಅಧಿಕೃತ ಮಾಧ್ಯಮವು ದಲಾಯಿ ಲಾಮಾ ಭೇಟಿಯನ್ನು ಖಂಡಿಸಿ ಲೇಖನವೊಂದನ್ನು ಪ್ರಕಟಿಸಿತ್ತು. ‘‘ದಲಾಯಿ ಲಾಮಾ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ತನ್ನ ಪೂರ್ವಾಧಿಕಾರಿಗಳಿಗಿಂತ ವಿಭಿನ್ನ ನಿಲುವನ್ನು ತಳೆದಿರುವಂತೆ ಅನಿಸುತ್ತಿದೆ. ಅವರು ದಲಾಯಿ ಲಾಮಾರ ಸಾರ್ವಜನಿಕ ಸಂಪರ್ಕಗಳನ್ನು ವೃದ್ಧಿಸುತ್ತಿದ್ದಾರೆ ಹಾಗೂ ಬೀಜಿಂಗ್‌ನ ನಿಲುವನ್ನು ಪ್ರಶ್ನಿಸುತ್ತಿದ್ದಾರೆ’’ ಎಂದು ಲೇಖನದಲ್ಲಿ ಬರೆಯಲಾಗಿದೆ.

ಅದೇ ವೇಳೆ, ‘‘ಭಾರತ ನನ್ನನ್ನು ಯಾವತ್ತೂ ಚೀನಾದ ವಿರುದ್ಧ ಬಳಸಿಲ್ಲ’’ ಎಂಬುದಾಗಿ ದಲಾಯಿ ಲಾಮಾ ಎನ್‌ಡಿಟಿವಿಗೆ ಹೇಳಿದ್ದಾರೆ.
ಅರುಣಾಚಲಪ್ರದೇಶ ‘ದಕ್ಷಿಣ ಟಿಬೆಟ್’ ಎಂಬುದಾಗಿ ಚೀನಾ ಹೇಳಿಕೊಳ್ಳುತ್ತಿದೆ. ಗಡಿ ರಾಜ್ಯವು ತನ್ನ ಭೂಭಾಗದ ಅವಿಭಾಜ್ಯ ಅಂಗವಾಗಿದೆ ಎಂದು ಭಾರತ ಪದೇ ಪದೇ ಹೇಳುತ್ತಿದೆ.

ಅರುಣಾಚಲಪ್ರದೇಶಕ್ಕೆ ದಲಾಯಿ ಲಾಮಾ ನೀಡಿರುವ ಒಂದು ವಾರದ ಭೇಟಿಯ ವಿಷಯದಲ್ಲಿ ಚೀನಾ ‘ಕೃತಕ ವಿವಾದ’ವೊಂದನ್ನು ಸೃಷ್ಟಿಸುತ್ತಿದೆ ಎಂದು ಭಾರತ ನಿನ್ನೆ ಹೇಳಿದೆ.

ದಲಾಯಿ ಲಾಮಾ ನೀಡಿರುವ ಭೇಟಿ ಧಾರ್ಮಿಕ, ರಾಜಕೀಯವಲ್ಲ ಎಂಬುದಾಗಿ ಭಾರತ ಈಗಾಗಲೇ ಸ್ಪಷ್ಟಪಡಿಸಿದೆ.
ದಲಾಯಿ ಲಾಮಾ ಓರ್ವ ಅಪಾಯಕಾರಿ ‘ಪ್ರತ್ಯೇಕತಾವಾದಿ’ಯಾಗಿದ್ದು, ಅವರು ಟಿಬೆಟನ್ನು ಚೀನಾದಿಂದ ಪ್ರತ್ಯೇಕಿಸಲು ಬಯಸುತ್ತಿದ್ದಾರೆ ಎಂಬುದಾಗಿ ಚೀನಾ ಭಾವಿಸುತ್ತಿದೆ.

‘‘ಟಿಬೆಟ್ ಚೀನಾದ ಭಾಗವಾಗಿದೆ, ಆದರೆ ಅಲ್ಲಿ ಇನ್ನಷ್ಟು ಅಭಿವೃದ್ಧಿಯಾಗಬೇಕಿದೆ’’ ಎಂಬುದಾಗಿ ಎನ್‌ಡಿಟಿವಿಯೊಂದಿಗೆ ಮಾತನಾಡಿದ 81 ವರ್ಷದ ದಲಾಯಿ ಲಾಮಾ ಹೇಳಿದ್ದಾರೆ.

 ಇದರ ಹೊರತಾಗಿಯೂ, ಲಾಮಾರ ಅರುಣಾಚಲಪ್ರದೇಶ ಭೇಟಿಗೆ ಚೀನಾ ತೀವ್ರ ವಿರೋಧ ವ್ಯಕ್ತಪಡಿಸುತ್ತದೆ ಹಾಗೂ ಈ ಬಗ್ಗೆ ಭಾರತಕ್ಕೆ ಪ್ರತಿಭಟನೆ ಸಲ್ಲಿಸುತ್ತೇವೆ ಎಂದು ಬೀಜಿಂಗ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶ ಸಚಿವಾಲಯದ ವಕ್ತಾರೆ ಹುವಾ ಚುನ್‌ಯಿಂಗ್ ಹೇಳಿದರು.


ಸೈನಿಕನ ವೇಷದಲ್ಲಿ ಭಾರತಕ್ಕೆ ಪಲಾಯನ

ಟಿಬೆಟ್‌ನಲ್ಲಿ ಎದ್ದ ಬಂಡಾಯವನ್ನು ದಮನಿಸಲು ಚೀನಾ ಸೇನೆಯನ್ನು ಕಳುಹಿಸಿದಾಗ, ಯುವ ಆಧ್ಯಾತ್ಮಿಕ ನಾಯಕ ದಲಾಯಿ ಲಾಮಾ ಪ್ರಾಣಭಯದಿಂದ 1959ರಲ್ಲಿ ಭಾರತಕ್ಕೆ ಪಲಾಯನಗೈದರು.

ಟಿಬೆಟ್‌ಗೆ ಬರುತ್ತಿದ್ದ ಚೀನಾದ ಸೈನಿಕರಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಅವರು ಸೈನಿಕನ ವೇಷದಲ್ಲಿ ಹಿಮಾಲಯ ಪರ್ವತದಲ್ಲಿ 13 ದಿನಗಳ ಕಾಲ ನಡೆದು ಅರುಣಾಚಲಪ್ರದೇಶದ ಮೂಲಕ ಭಾರತ ಪ್ರವೇಶಿಸಿದರು.

ಭಾರತ ಅವರಿಗೆ ಧರ್ಮಶಾಲೆಯಲ್ಲಿ ನೆಲೆಯೊಂದನ್ನು ಒದಗಿಸಿತು. ಅಲ್ಲಿ ಅವರು ಟಿಬೆಟ್ ದೇಶಭ್ರಷ್ಟ ಸರಕಾರವೊಂದನ್ನು ಸ್ಥಾಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X