ರಾಷ್ಟ್ರೀಕೃತ ಮತ್ತು ವಾಣಿಜ್ಯ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಕೇಂದ್ರ ಮನ್ನಾ ಮಾಡಲಿ: ಸಿಎಂ

ಮೈಸೂರು, ಎ. 6: ರಾಷ್ಟ್ರೀಕೃತ ಮತ್ತು ವಾಣಿಜ್ಯ ಬ್ಯಾಂಕ್‌ಗಳಿಂದ ರೈತರು ಮಾಡಿರುವ ಸಾಲವನ್ನು ಕೇಂದ್ರ ಸರಕಾರ ಮನ್ನಾ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಹಕಾರ ಬ್ಯಾಂಕ್‌ಗಳ ಮೂಲಕ ರೈತರು ಪಡೆದಿರುವ ಸಾಲವನ್ನು ರಾಜ್ಯ ಸರಕಾರ ಮನ್ನಾ ಮಾಡಬಹುದು. ಆದರೆ, ರಾಷ್ಟ್ರೀಕೃತ ಮತ್ತು ವಾಣಿಜ್ಯ ಬಾಂಕ್‌ಗಳಇಂದ ರೈತರು ಪಡೆದಿರುವ ಸಾಲವನ್ನು ಯಾರು ಮನ್ನಾ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.ಸಾರ್ವಜನಿಕರ ತೆರಿಗೆ ಹಣವನ್ನು ತಂದು ಸರಕಾರ ಉಪ ಚುನಾವಣೆ ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರು ಆರೋಪ ಮಾಡಿದ್ದಾರೆ. ಆದರೆ, ಈ ರೀತಿ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಈ ರೀತಿಯಾಗಿ ಹಣ ಖರ್ಚು ಮಾಡಿದರೆ ಚುನಾವಣಾ ಆಯೋಗ ಗಮನಿಸಿ ಕ್ರಮ ಕೈಗೊಳ್ಳುವುದಲ್ಲವೆ. ಬಿಜೆಪಿಯವರು ಮಾಡುವುದನ್ನು ನಮಗೆ ಹೇಳುತ್ತಿದ್ದಾರೆ ಎಂದರು.
Next Story





