ದೇಶದಾದ್ಯಂತ ವಿವಿಧೆಡೆ ಐಟಿ ದಾಳಿ
100 ಕೋಟಿ ರೂ. ಅಕ್ರಮ ಹಣ ಪತ್ತೆ

ಹೊಸದಿಲ್ಲಿ, ಎ.6: ದೇಶದಾದ್ಯಂತ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆಯು ಇಂದು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ತೆರಿಗೆ ತಪ್ಪಿಸಿ ಸಂಗ್ರಹಿಸಿಡಲಾಗಿದ್ದ ಸುಮಾರು 100 ಕೋಟಿ ರೂ. ಅಕ್ರಮ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಅಹ್ಮದಾಬಾದ್ ಮೂಲದ ರಿಯಲ್ ಎಸ್ಟೇಟ್ ಉದ್ಯಮಿಯ ವಿರುದ್ಧ ಪ್ರಥಮ ಹಂತದ ಕಾರ್ಯಾಚರಣೆ ನಡೆಸಲಾಗಿತ್ತು. ಈ ಕಾರ್ಯಾಚರಣೆಯ ಅಂಗವಾಗಿ ದಿಲ್ಲಿ, ಮುಂಬೈ, ರಾಜ್‌ಕೋಟ್, ಹೈದರಾಬಾದ್ ಮತ್ತು ಅಹ್ಮದಾಬಾದ್‌ನ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ನೋಟು ಅಮಾನ್ಯೀಕರಣ ಪ್ರಕ್ರಿಯೆ ಕೊನೆಗೊಂಡ ಬಳಿಕ, ಕಾಳ ಧನಿಕರು ತಮ್ಮಲ್ಲಿರುವ ಅಕ್ರಮ ಹಣವನ್ನು ಸಕ್ರಮಗೊಳಿಸಲು ಕೇಂದ್ರ ಸರಕಾರ ಜಾರಿಗೆ ತಂದಿದ್ದ ‘ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ’(ಪಿಎಂಜಿಕೆವೈ) ಮಾರ್ಚ್ 31ಕ್ಕೆ ಅಂತ್ಯಗೊಂಡಿದ್ದು, ಆ ಬಳಿಕ ನಡೆದಿರುವ ಪ್ರಪ್ರಮ ಬೃಹತ್ ಕಾರ್ಯಾಚರಣೆ ಇದಾಗಿದೆ.
Next Story





