Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಷ್ಮಾ ಸ್ಥಾನಕ್ಕೆ ಬರಲಿದ್ದಾರೆಯೇ ಈ...

ಸುಷ್ಮಾ ಸ್ಥಾನಕ್ಕೆ ಬರಲಿದ್ದಾರೆಯೇ ಈ ಮುಖ್ಯಮಂತ್ರಿ ?

ವಾರ್ತಾಭಾರತಿವಾರ್ತಾಭಾರತಿ6 April 2017 10:30 PM IST
share
ಸುಷ್ಮಾ ಸ್ಥಾನಕ್ಕೆ ಬರಲಿದ್ದಾರೆಯೇ ಈ ಮುಖ್ಯಮಂತ್ರಿ  ?

ಹೊಸದಿಲ್ಲಿ, ಎ. 6 : ಉತ್ತರ ಪ್ರದೇಶದಲ್ಲಿ ಪ್ರಚಂಡ ಜಯಭೇರಿಯ ಬಳಿಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಪುಟಕ್ಕೆ ಸರ್ಜರಿ ಮಾಡಲು ಹೊರಟಿದ್ದಾರೆ ಎಂದು ಹೇಳಲಾಗಿದೆ. 

ಇತ್ತೀಚಿಗೆ ಗೋವಾದಲ್ಲಿ ಮುಖ್ಯಮಂತ್ರಿಯಾಗಲು ರಕ್ಷಣಾ ಸಚಿವರ ಹುದ್ದೆಗೆ ಮನೋಹರ್ ಪಾರಿಕ್ಕರ್ ರಾಜೀನಾಮೆ ನೀಡಿದ ಮೇಲೆ ಅದರ ಹೆಚ್ಚುವರಿ ಹೊಣೆಗಾರಿಕೆ ವಿತ್ತ ಸಚಿವ ಅರುಣ್ ಜೇಟ್ಲಿ ಮೇಲೆ ಬಿದ್ದಿದೆ. ಆ ಮಹತ್ವದ ಇಲಾಖೆಗೆ ಪೂರ್ಣ ಕಾಲಿಕ , ಅನುಭವಿ ಸಚಿವರ ನೇಮಕ ಸದ್ಯದ ತುರ್ತು ಅಗತ್ಯ . ಆದರೆ ಮೋದಿ ಅಷ್ಟಕ್ಕೇ ನಿಲ್ಲದೆ ಕೆಲವು ಮಹತ್ವದ ಬದಲಾವಣೆಗಳಿಗೆ ಕೈ ಹಾಕಲಿದ್ದಾರೆ ಎಂದು ವದಂತಿಗಳು ಹರಡಿವೆ. 

ಫೈನಾನ್ಷಿಯಲ್ ಎಕ್ಸ್ ಪ್ರೆಸ್ ವರದಿಯ ಪ್ರಕಾರ ಇತ್ತೀಚಿಗೆ ಕಿಡ್ನಿ ವೈಫಲ್ಯದಿಂದಾಗಿ ಚಟುವಟಿಕೆ ಕಡಿಮೆ ಆಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಜಾಗಕ್ಕೆ ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಸಿಂಧಿಯಾ ಬರಲಿದ್ದಾರೆ. ಓಂ ಮಾಥುರ್ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಇದು ಹೌದು ಎಂದಾದರೆ ಇದು ನಿಜಕ್ಕೂ ಬಹುದೊಡ್ಡ ಬದಲಾವಣೆ.   ಗೋವಾ ಮುಖ್ಯಮಂತ್ರಿ ಹುದ್ದೆಗಾಗಿ ಒಂದು ಪ್ರಮುಖ ಸಚಿವನನ್ನು ಕಳಕೊಂಡ ಮೋದಿ ಅವರ ಸಂಪುಟದ ಇನ್ನೊಂದು ಪ್ರಮುಖ ಹುದ್ದೆಗೆ ಪಕ್ಷದ ನಾಯಕರೊಬ್ಬರು ಮುಖ್ಯಮಂತ್ರಿ ಪದವಿ ಬಿಟ್ಟು ಬಂದ ಹಾಗೆ ಆಗುತ್ತದೆ. 

ಸುಷ್ಮಾ ಸ್ವರಾಜ್ ತಮ್ಮ ಕಾರ್ಯ ವೈಖರಿಯ ಮೂಲಕ ಮೋದಿ ಸಂಪುಟದ ನಂಬರ್ ಒನ್ ಸಚಿವೆ ಎಂಬ ಮನ್ನಣೆಗೆ ಪಾತ್ರರಾಗಿದ್ದಾರೆ. ಆದರೆ ಅನಾರೋಗ್ಯದಿಂದಾಗಿ ಅವರಿಗೆ ಆ ಮಹತ್ವದ ಹುದ್ದೆಯಲ್ಲಿ ಮುಂದುವರಿಯಲು ಕಷ್ಟವಾಗಬಹುದು ಎಂಬ ಮಾತುಗಳಿವೆ. ಜೊತೆಗೆ ನೂತನ ರಾಷ್ಟ್ರಪತಿಯಾಗುವವರ ಪಟ್ಟಿಯಲ್ಲೂ ಸುಷ್ಮಾ ಮುಂದಿದ್ದಾರೆ . ಮಹಿಳೆ ಆಗುವುದಿದ್ದರೆ ಬಿಜೆಪಿ ಹಾಗು ಸಂಘ ಪರಿವಾರದ ಪ್ರಥಮ ಆದ್ಯತೆಯ ಅಭ್ಯರ್ಥಿ ಸುಷ್ಮಾ ಎಂದೂ ಹೇಳಲಾಗುತ್ತಿದೆ. ಹಾಗಾಗಿ ವಸುಂಧರಾ ಅವರನ್ನು ಕೇಂದ್ರಕ್ಕೆ ತಂದು ಪಕ್ಷದಲ್ಲಿ ಎರಡನೇ ತಲೆಮಾರಿನ ನಾಯಕತ್ವ ರೂಪಿಸುವುದು ಮೋದಿ ಗುರಿ ಎಂದು ಹೇಳಲಾಗುತ್ತಿದೆ. 

ಉತ್ತರ ಪ್ರದೇಶ ಮುಖ್ಯಮಂತ್ರಿ ಹುದ್ದೆಯನ್ನು  ಕೊನೆಗಳಿಗೆಯಲ್ಲಿ ತಪ್ಪಿಸಿಕೊಂಡ ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರಿಗೆ ಸಂಪುಟದಲ್ಲಿ ಭಡ್ತಿ ನೀಡಲು ಮೋದಿ ನಿರ್ಧಸಿದ್ದಾರೆ ಎಂದು ತಿಳಿದು ಬಂದಿದೆ. ಹಾಗೆ ೭೫ ವರ್ಷವಾಗಿರುವ ಹಿರಿಯ ನಾಯಕ ಕಲ್ರಾಜ್ ಮಿಶ್ರಾ ಅವರು ಸಂಪುಟದಿಂದ ನಿರ್ಗಮಿಸುವ ಸಾಧ್ಯತೆ ಇದೆ ಎಂದು ಫೈನಾನ್ಷಿಯಲ್ ಟೈಮ್ಸ್ ವರದಿ ಮಾಡಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X