ನಾಳೆ ಲೋಕ ಅದಾಲತ್
ಉಡುಪಿ, ಎ.6: ರಾಪ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎ.8(2ನೆ ಶನಿವಾರ)ರಂದು ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಲೋಕ ಅದಾಲತ್‌ನ್ನು ಆಯೋಜಿಸಲಾಗಿದೆ.
ರಾಜಿ ಸಂಧಾನಕ್ಕೆ ಯೋಗ್ಯವಿರುವ, ಇತ್ಯರ್ಥಕ್ಕೆ ಬಾಕಿ ಇರುವ ಎಲ್ಲಾ ವಿಧದ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ದಾವೆಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಇಲ್ಲಿ ಅವಕಾ ವಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





