ವಿದ್ಯಾರ್ಥಿ ದಿವಿತ್ ರೈ ಕವನ ಸಂಕಲನ ಲೋಕಾರ್ಪಣೆ

ಪುತ್ತೂರು, ಎ.6: ಹಾರಾಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಎಂಟನೆ ತರಗತಿ ವಿದ್ಯಾರ್ಥಿ ದಿವಿತ್ ರೈ ಬರೆದ ‘ಡೀವ್ ಡ್ರಾಪ್ಸ್’ ಇಂಗ್ಲಿಷ್ ಕವನ ಸಂಕಲನ ಶಾಲೆಯ ಸಭಾಂಗಣದಲ್ಲಿ ಗುರುವಾರ ಲೋಕಾರ್ಪಣೆಗೊಂಡಿತು.
ಕೃತಿಯನ್ನು ಹಿರಿಯ ಶಿಕ್ಷಣ ತಜ್ಞ ಡಾ.ಎನ್.ಸುಕುಮಾರ್ ಗೌಡ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಎಚ್.ಮಾಧವ ಭಟ್ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಗಿರೀಶ್ ಭಟ್ ಅಜಕ್ಕಳ, ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಆಡಳಿತ ಮಂಡಳಿಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಹಾರಾಡಿ ಶಾಲೆಯ ಮುಖ್ಯ ಶಿಕ್ಷಕ ಮುದರ ಎಸ್., ದಿವಿತ್ ರೈ, ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಬಿ.ಪುರಂದರ ಭಟ್, ನಿವೃತ್ತ ಪ್ರೊಫೆಸರ್ ಬಿ.ಜೆ.ಸುವರ್ಣ, ಪುರಸಭಾ ಮಾಜಿ ಅಧ್ಯಕ್ಷ ಯು. ಲೋಕೇಶ್ ಹೆಗ್ಡೆ, ಶಿಕ್ಷಕ ರಮೇಶ್ ಉಳಯ, ಶಿಕ್ಷಕಿ ಭಾರತಿ ಸ್ವರಮನೆ, ನಗರಸಭಾ ಸದಸ್ಯರಾದ ಸ್ವರ್ಣಲತಾ ಹೆಗ್ಡೆ, ಉಷಾ ಧನಂಜಯ ಆಚಾರ್ಯ, ಜೆಸಿಂತಾ ಮಸ್ಕರೇನ್ಹಸ್, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ದಯಾನಂದ ರೈ ಮನವಳಿಕೆ ಮತ್ತಿತರರು ಉಪಸ್ಥಿತರಿದ್ದರು.
ದಿವಿತ್ ರೈಗೆ ಕವನ ರಚನೆಗೆ ಪ್ರೋತ್ಸಾಹ ನೀಡಿದ ಹಾರಾಡಿ ಶಾಲೆಯ ಶಿಕ್ಷಕ ಪ್ರಶಾಂತ್ ಅನಂತಾಡಿಯವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಹಿರಿಯ ರಂಗಕರ್ಮಿ ಐ.ಕೆ. ಬೊಳುವಾರ್ ಅನಿಸಿಕೆ ವ್ಯಕ್ತಪಡಿಸಿದರು.
ಹಾರಾಡಿ ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷೆ ಪ್ರತಿಮಾ ಯು. ರೈ ಸ್ವಾಗತಿಸಿದರು. ಶಿಕ್ಷಕ ಪ್ರಶಾಂತ್ ಅನಂತಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅವಿನಾಶ್ ಕೊಡೆಂಕಿರಿ ಕಾರ್ಯಕ್ರಮ ನಿರ್ವಹಿಸಿದರು. ರವಿಪ್ರಸಾದ್ ಶೆಟ್ಟಿ ವಂದಿಸಿದರು.







