Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಂಗಲ್ ಬಿಡುಗಡೆಗೆ...

ದಂಗಲ್ ಬಿಡುಗಡೆಗೆ ರಾಷ್ಟ್ರಧ್ವಜ-ರಾಷ್ಟ್ರಗೀತೆ ಕೈಬಿಡಿ ಎಂಬ ಪಾಕ್ ಷರತ್ತು: ಆಮಿರ್ ಖಾನ್ ಪ್ರತಿಕ್ರಿಯೆ ಏನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ7 April 2017 4:03 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದಂಗಲ್ ಬಿಡುಗಡೆಗೆ ರಾಷ್ಟ್ರಧ್ವಜ-ರಾಷ್ಟ್ರಗೀತೆ ಕೈಬಿಡಿ ಎಂಬ ಪಾಕ್ ಷರತ್ತು: ಆಮಿರ್ ಖಾನ್ ಪ್ರತಿಕ್ರಿಯೆ ಏನು ಗೊತ್ತೇ?

ಇಸ್ಲಾಮಾಬಾದ್, ಎ.7: ಭಾರತದ ರಾಷ್ಟ್ರಗೀತೆ ಹಾಗೂ ಭಾರತೀಯ ಧ್ವಜ ಪ್ರದರ್ಶನ ಇರುವ ದೃಶ್ಯಕ್ಕೆ ಕತ್ತರಿ ಹಾಕಿದಲ್ಲಿ ಮಾತ್ರ ಪಾಕಿಸ್ತಾನದಲ್ಲಿ ದಂಗಲ್ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಾಗಿ ಅಲ್ಲಿನ ಸೆನ್ಸಾರ್ ಮಂಡಳಿ ವಿಧಿಸಿರುವ ಷರತ್ತನ್ನು ಬಾಲಿವುಡ್ ನಟ, ನಿರ್ಮಾಪಕ ಆಮಿರ್ ಖಾನ್ ನಿರಾಕರಿಸುವ ಮೂಲಕ ಅಪೂರ್ವ ರಾಷ್ಟ್ರಪ್ರೇಮ ಮೆರೆದಿದ್ದಾರೆ.

ಕಳೆದ ವರ್ಷ ಉರಿ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷ ವಿಕೋಪಕ್ಕೆ ಹೋದ ಹಿನ್ನೆಲೆಯಲ್ಲಿ ಪಾಕಿಸ್ತಾನಿ ಕಲಾವಿದರನ್ನು ಭಾರತೀಯ ಚಿತ್ರರಂಗದಿಂದ ನಿಷೇಧಿಸುವ ನಿರ್ಧಾರವನ್ನು ಭಾರತೀಯ ಚಲನಚಿತ್ರ ನಿರ್ಮಾಪಕರ ಸಂಘ ಕೈಗೊಂಡಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನದ ಥಿಯೇಟರ್ ಮಾಲಕರು ತಾತ್ಕಾಲಿಕವಾಗಿ ಭಾರತದ ಚಿತ್ರಗಳನ್ನು ಪಾಕಿಸ್ತಾನದಲ್ಲಿ ಪ್ರದರ್ಶಿಸುವುದನ್ನು ನಿಷೇಧಿಸಿದ್ದರು.

ಆದರೆ ಈ ವರ್ಷಾರಂಭದಲ್ಲಿ ಪಾಕಿಸ್ತಾನ ಈ ನಿಷೇಧವನ್ನು ರದ್ದುಪಡಿಸಿ, ಭಾರತೀಯ ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಇತ್ತೀಚೆಗೆ ನೆರೆ ರಾಷ್ಟ್ರದ ಕೆಲ ಸ್ಥಳೀಯ ವಿತರಕರು ದಂಗಲ್ ಚಿತ್ರವನ್ನು ಪಾಕಿಸ್ತಾನದಲ್ಲಿ ಬಿಡುಗಡೆ ಮಾಡಬೇಕು ಎಂದು ಕೋರಿದ್ದ ಹಿನ್ನೆಲೆಯಲ್ಲಿ ಅದಕ್ಕೆ ಆಮಿರ್ ಖಾನ್ ಸಮ್ಮತಿ ಸೂಚಿಸಿದ್ದರು. ಪಾಕಿಸ್ತಾನಿ ನಾಗರಿಕರು ಹಿಂದಿ ಚಿತ್ರ ಹಾಗೂ ಭಾರತೀಯ ನಟರನ್ನು ಇಷ್ಟಪಡುವ ಹಿನ್ನೆಲೆಯಲ್ಲಿ ಇದಕ್ಕೆ ಸಮ್ಮತಿ ಸೂಚಿಸಿದ್ದರು.

ಇಷ್ಟಾಗಿಯೂ ಚಿತ್ರ ಅಲ್ಲಿ ಬಿಡುಗಡೆಯಾಗಿಲ್ಲ. ಇದಕ್ಕೆ ಕಾರಣ ಹುಡುಕಿ ಹೊರಟ "ಹಿಂದೂಸ್ತಾನ್ ಟೈಮ್ಸ್’ಗೆ ತಿಳಿದು ಬಂದ ಅಂಶವೆಂದರೆ, ಚಿತ್ರದ ಎರಡು ದೃಶ್ಯ ಹೊರತುಪಡಿಸಿ ಪಾಕಿಸ್ತಾನಿ ಸೆನ್ಸಾರ್ ಮಂಡಳಿ ಒಪ್ಪಿಗೆ ನೀಡಿತ್ತು. ಒಂದು ದೃಶ್ಯದಲ್ಲಿ ಭಾರತದ ತ್ರಿವರ್ಣ ಧ್ವಜ ಪ್ರದರ್ಶಿಸಲಾಗಿದ್ದರೆ, ಮತ್ತೊಂದು ದೃಶ್ಯದಲ್ಲಿ ಗೀತಾ ಫೊಗತ್ ಚಿನ್ನದ ಪದಕ ಗೆದ್ದ ಬಳಿಕ ಭಾರತದ ರಾಷ್ಟ್ರಗೀತೆ ನುಡಿಸಲಾಗಿತ್ತು. ಈ ಎರಡು ದೃಶ್ಯಗಳನ್ನು ಕಿತ್ತುಹಾಕುವಂತೆ ಸೆನ್ಸಾರ್ ಮಂಡಳಿ ಸೂಚಿಸಿದೆ. ಆದರೆ ಇದಕ್ಕೆ ಆಮಿರ್ ಖಾನ್ ನಿರಾಕರಿಸಿದ್ದೇ ಚಿತ್ರ ಬಿಡುಗಡೆಯಾಗದಿರಲು ಕಾರಣ.

ಪಾಕಿಸ್ತಾನದ ಬಗ್ಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಯಾವ ಉಲ್ಲೇಖವೂ ಚಿತ್ರದಲ್ಲಿಲ್ಲ; ಈ ಚಿತ್ರ ಸಂಪೂರ್ಣವಾಗಿ ಕ್ರೀಡಾ ವ್ಯಕ್ತಿಚಿತ್ರವಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೆ ರಾಷ್ಟ್ರಗೀತೆ ದೃಶ್ಯ ಕಿತ್ತುಹಾಕಲು ಆಮಿರ್ ಖಾನ್ ಒಪ್ಪಿಲ್ಲ ಎಂದು ಹೇಳಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X