ವಿಟಿಯು ಅಂತರ್ ಕಾಲೇಜು ಖೋ ಖೋ ಪಂದ್ಯಾಟ: ಆಳ್ವಾಸ್ ತಂಡಕ್ಕೆ ಪ್ರಶಸ್ತಿ

ಮೂಡುಬಿದಿರೆ, ಎ.7: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮಟ್ಟದ(ಬೆಂಗಳೂರು ವಿಭಾಗ ಹೊರತುಪಡಿಸಿ) ಮಹಿಳೆಯರ ಖೋಖೋ ಪಂದ್ಯಾಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ತಂಡವು ಇನಿಂಗ್ಸ್ ಹಾಗೂ 9 ಅಂಕಗಳೊಂದಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು.
ಗದಗದ ಎಸ್.ಕೆ.ಎಸ್.ವಿ.ಎಂ. ಇಂಜಿನಿಯರಿಂಗ್ ಕಾಲೇಜು ತಂಡವು ರನ್ನರ್ ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಐಟಿ ವಿಬಾಗದ ಮುಖ್ಯಸ್ಥ ಡಾ.ಪ್ರವೀಣ್ ಜೆ. ಪ್ರಶಸ್ತಿ ವಿತರಿಸಿದರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಹ ಆಡಳಿತಾಧಿಕಾರಿ ರಾಕೇಶ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್ ಉಪಸ್ಥಿತರಿದ್ದರು.
Next Story





