Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇವಸ್ಥಾನದಲ್ಲಿ ದೇವಿಯ ಖಡ್ಗದಿಂದ...

ದೇವಸ್ಥಾನದಲ್ಲಿ ದೇವಿಯ ಖಡ್ಗದಿಂದ ವ್ಯಕ್ತಿಯನ್ನು ಕೊಚ್ಚಿ ಬರ್ಬರ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ7 April 2017 2:17 PM IST
share
ದೇವಸ್ಥಾನದಲ್ಲಿ ದೇವಿಯ ಖಡ್ಗದಿಂದ ವ್ಯಕ್ತಿಯನ್ನು ಕೊಚ್ಚಿ ಬರ್ಬರ ಹತ್ಯೆ

ಹೊಸದಿಲ್ಲಿ,ಎ.7: ದಕ್ಷಿಣ ದಿಲ್ಲಿಯ ಅಂಬೇಡ್ಕರ್ ನಗರದ ದೇವಸ್ಥಾನವೊಂದರಲ್ಲಿ ಗುರುವಾರ ರಾತ್ರಿ ನಾಲ್ವರು ದುಷ್ಕರ್ಮಿಗಳ ಗುಂಪೊಂದು 30ರ ಹರೆಯದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದೆ. ಹಂತಕರು ದೇವಿಯ ಮೂರ್ತಿಯ ಬಳಿಯಲ್ಲಿದ್ದ ಖಡ್ಗವನ್ನು ಎಳೆದು ಅದರಿಂದಲೇ ಆತನನ್ನು ಕೊಚ್ಚಿದ್ದಾರೆ. ಜೊತೆಗೆ ತಾವು ತಂದಿದ್ದ ಚೂರಿಗಳಿಂದ 14 ಬಾರಿ ಇರಿದಿದ್ದು, ಆತ ಸ್ಥಳದಲ್ಲಿಯೇ ದಾರುಣ ಸಾವನ್ನಪ್ಪಿದ್ದಾನೆ.

ಪೆರುಮಾಳ್ ಕೊಲೆಯಾಗಿರುವ ವ್ಯಕ್ತಿ. ಆತನ ಪತ್ನಿಯ ಕಣ್ಣೆದುರೇ ಈ ಹತ್ಯೆ ನಡೆದಿದೆ. ಆಕೆಯನ್ನೂ ಹಂತಕರು ಥಳಿಸಿದ್ದಾರೆ.

ಹತ್ಯೆ ಆರೋಪಿಗಳು ಮತ್ತು ಕೊಲೆಯಾದ ಪೆರುಮಾಳ್ ದಕ್ಷಿಣಪುರಿ ಬಡಾವಣೆಯ ನಿವಾಸಿಗಳಾಗಿದ್ದು, ಎಲ್ಲರೂ ತಮಿಳುನಾಡಿನವರಾಗಿದ್ದಾರೆ. ಬದುಕಿಗಾಗಿ ಚಿಲ್ಲರೆ ಕೆಲಸಗಳನ್ನು ಮಾಡಿಕೊಂಡಿದ್ದಾರೆ.

ಪೆರುಮಾಳ್ ಮತ್ತು ನಾಲ್ವರು ಆರೋಪಿಗಳ ನಡುವೆ ಈ ಹಿಂದೆ ಜಗಳ, ಹೊಡೆದಾಟಗಳು ನಡೆದಿದ್ದು, ಆಗೆಲ್ಲ ಪರಿಸ್ಥಿತಿ ಕೈಮೀರದಂತೆ ಸ್ಥಳೀಯರು ಮಧ್ಯಪ್ರವೇಶಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು.

ಗುರುವಾರ ರಾತ್ರಿ 10 ಗಂಟೆಯ ಸುಮಾರಿಗೆ ಪೆರುಮಾಳ್ ತನ್ನ ಪತ್ನಿ ಮತ್ತು ಸ್ನೇಹಿತನ ಜೊತೆ ದೇವಸ್ಥಾನದಲ್ಲಿದ್ದಾಗ, ಆರೋಪಿಗಳೂ ಅಲ್ಲಿಗೆ ಬಂದಿದ್ದರು. ಈ ವೇಳೆ ಆರೋಪಿಗಳ ಪೈಕಿ ಓರ್ವ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಪೆರುಮಾಳ್‌ನ ಸ್ನೇಹಿತನನ್ನು ಕೆಣಕಿದ್ದ. ಇದು ಅವರಿಬ್ಬರ ನಡುವೆ ಹೊಡೆದಾಟಕ್ಕೆ ಕಾರಣವಾಗಿದ್ದು, ಜಗಳ ಬಿಡಿಸಲು ಪೆರುಮಾಳ್ ಮಧ್ಯಪ್ರವೇಶಿಸಿದ್ದ. ಬಳಿಕ ನಡೆದ ಹಿಂಸಾಚಾರದಲ್ಲಿ ಪೆರುಮಾಳ್ ಬರ್ಬರವಾಗಿ ಹತ್ಯೆಯಾಗಿದ್ದಾನೆ. ಬೊಬ್ಬೆ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸುವುಷ್ಟರಲ್ಲಿ ಹಂತಕರು ಅಲ್ಲಿಂದ ಪರಾರಿಯಾಗಿದ್ದರು.

ಪೆರುಮಾಳ್‌ನ ಪತ್ನಿಯ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆರ್.ಶ್ರೀನಿವಾಸ, ಆರ್.ಶೇಖರ ಮತ್ತು ಆರ್.ನಟೇಶನ್ ಎನ್ನುವವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ತಲೆಮರೆಸಿಕೊಂಡಿರುವ ಇನ್ನೋರ್ವ ಆರೋಪಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X