ಪ್ರತಿಭಟನಕಾರರ ಬಂಧನ ಪ್ರಕರಣ: 26 ಮಂದಿಯ ಬಿಡುಗಡೆಗೆ ಕೋರ್ಟ್ ಆದೇಶ

ಮಂಗಳೂರು, ಎ. 7: ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕನಿಗೆ ನ್ಯಾಯ ಒದಗಿಸಲುವಂತೆ ಆಗ್ರಹಿಸಿ ಹಾಗೂ ದೌರ್ಜನ್ಯ ಪ್ರಕರಣವನ್ನು ತನಿಖೆಗೊಳಪಡಿಸುವಂತೆ ಒತ್ತಾಯಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೇತ್ವತ್ವದಲ್ಲಿ ಕಮಿಷನರ್ ಕಚೇರಿಗೆ ಮುತ್ತಿಗೆ ಯತ್ನ ಸಂದರ್ಭದಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟು ನ್ಯಾಯಾಂಗ ಬಂಧನದಲ್ಲಿದ್ದ 26 ಮಂದಿಯನ್ನು ಜಾಮೀನಿನ ಮೇಲೆ ಬಿಡುಗಡೆಗೆ ನ್ಯಾಯಾಲಯ ಆದೇಶ ನೀಡಿದೆ.
98 ಮಂದಿ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ್ದು, ಅದೇ ದಿನ 72 ಮಂದಿಯನ್ನು ಬಿಡುಗಡೆಗೊಳಿಸಲಾಗಿತ್ತು. ಆದರೆ, 26 ಮಂದಿಯನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಈ ಬಗ್ಗೆ ಗುರುವಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಶುಕ್ರವಾರ ಜಾಮೀನು ಮೇಲೆ ಬಿಡುಗಡೆಗೆ ನ್ಯಾಯಾಲಯ ಆದೇಶ ನೀಡಿದೆ.
Next Story





