Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಸ್ತೂರಿ ರಂಗನ್ ವರದಿ: ಗ್ರಾಮಮಟ್ಟದಲ್ಲಿ...

ಕಸ್ತೂರಿ ರಂಗನ್ ವರದಿ: ಗ್ರಾಮಮಟ್ಟದಲ್ಲಿ ವಿಶೇಷ ಗ್ರಾಮಸಭೆ ನಡೆಸಲು ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ8 April 2017 8:19 PM IST
share
ಕಸ್ತೂರಿ ರಂಗನ್ ವರದಿ: ಗ್ರಾಮಮಟ್ಟದಲ್ಲಿ ವಿಶೇಷ ಗ್ರಾಮಸಭೆ ನಡೆಸಲು ನಿರ್ಧಾರ

ಮಡಿಕೇರಿ, ಎ.8: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲು ಗ್ರಾಮ ಮಟ್ಟದಲ್ಲಿ ವಿಶೇಷ ಗ್ರಾಮ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ ಬಾಧಕಗಳನ್ನು ಚರ್ಚಿಸಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲು ವಿಶೇಷ ಗ್ರಾಮ ಸಭೆ ನಡೆಸಲಾಗುತ್ತಿದೆ. ಸಾರ್ವಜನಿಕರು ವಿಶೇಷ ಗ್ರಾಮ ಸಭೆ ಸಂದರ್ಭದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ಅನುಮತಿ ನೀಡಿದ ಚಟುವಟಿಕೆಗಳು: 

ಸ್ಥಳೀಯ ನಿವಾಸಿಗಳ ವಾಸದ ಅವಶ್ಯಕತೆಗನುಗುಣವಾಗಿ ರಾಜ್ಯ ಸರಕಾರ ಪೂರ್ವಾನುಮತಿ ಪಡೆದು ಮತ್ತು ಉಸ್ತುವಾರಿ ಸಮಿತಿಯ ಶಿಫಾರಸ್ಸಿನ ಮೇರೆಗೆ ಸೂಕ್ಷ್ಮ ಪರಿಸರ ತಾಣದಲ್ಲಿ ಕೃಷಿ ಜಮೀನನ್ನು ಪರಿವರ್ತಿಸಲು ಅನುಮತಿ, ಪರಿಸರ ಸ್ನೇಹಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ, ಪ್ರವಾಸಿಗರ ತಾತ್ಕಾಲಿಕ ತಂಗುವಿಕೆಗಾಗಿ ಪರಿಸರ ಸ್ನೇಹಿ ಕಾಟೇಜ್‌ಗಳು, ಮರದ ಮನೆಗಳು ಇತ್ಯಾದಿ. ಇರುವ ರಸ್ತೆಗಳನ್ನು ಅಗಲೀಕರಿಸುವುದು ಮತ್ತು ಬಲಪಡಿಸುವುದು, ಪರಿಸರ ಮಾಲಿನ್ಯಕ್ಕೆ ಕಾರಣವಾಗದಂತಹ ಸಣ್ಣ ಪ್ರಮಾಣದ ಕೈಗಾರಿಕೆಗಳು, ಮಳೆ ನೀರು ಕೊಯ್ಲು ಮತ್ತು ಸ್ಥಳೀಯ ಅಗತ್ಯಕ್ಕೆ ತಕ್ಕಂತೆ ಗೃಹ ಕೈಗಾರಿಕೆಗಳು, ಗ್ರಾಮೀಣ ಕೈಗಾರಿಕೆಗಳು.

ಪ್ರೋತ್ಸಾಹಕ ಚಟುವಟಿಕೆಗಳು: ಹಾಲು, ಹಾಲಿಗೆ ಸಂಬಂಧಿಸಿದ ಕೃಷಿ ಸೇರಿದಂತೆ ಸ್ಥಳೀಯವಾಗಿ ಆಚರಣೆಯಲ್ಲಿರುವ ಕೃಷಿ ಮತ್ತು ತೋಟಗಾರಿಕೆ ಪದ್ಧತಿಗಳು ಮಳೆನೀರು ಕೊಯ್ಲು ಸಾವಯವ ಕೃಷಿ ಗ್ರಾಮೀಣ ಕುಶಲ ಕಲೆಗಳು ಸೇರಿದಂತೆ ಗೃಹ ಕೈಗಾರಿಕೆಗಳು.

ನಿರ್ಮಾಣ ಚಟುವಟಿಕೆಗಳು: ಸ್ಥಳೀಯ ಜನರು ಅವರ ಜಾಗದಲ್ಲಿ ಅವರ ವಾಸದ ಉಪಯೋಗಕ್ಕೆ ನಿರ್ಮಾಣ ಚಟುವಟಿಕೆಗಳನ್ನು ಕೈಗೊಳ್ಳಲು ಅನುಮತಿಸಿದೆ. ಮಾಲಿನ್ಯಕ್ಕೆ ಕಾರಣವಾಗದಂತಹ ಸಣ್ಣ ಪ್ರಮಾಣದ ಕೈಗಾರಿಕೆ ನಿರ್ಮಾಣ ಚಟುವಟಿಕೆ ನಿಯಂತ್ರಿಸಿದೆ ಮತ್ತು ಕನಿಷ್ಠ ಮಿತಿಗೊಳಪಡಿಸಿದೆ. ಅರಣ್ಯ, ಸರ್ಕಾರಿ, ಕಂದಾಯ ಅಥವಾ ಖಾಸಗಿ ಜಮೀನುಗಳಲ್ಲಿನ ಮರಗಳನ್ನು ರಾಜ್ಯ ಸರ್ಕಾರದ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕಡಿಯುವಂತಿಲ್ಲ.

ಅಂತರ್ಜಲ ಕೊಯ್ಲು ಸೇರಿದಂತೆ ವಾಣಿಜ್ಯ ಜಲ ಸಂಪನ್ಮೂಲಗಳು:   ಭೂ ಮಾಲಕರು ಗೃಹ ಬಳಕೆಗೆ ಮತ್ತು ಸ್ವಂತ ಕೃಷಿ ಉಪಯೋಗಕ್ಕೆ ಮಾತ್ರ ಮೇಲ್ಮೈ ನೀರು ಮತ್ತು ಅಂತರ್ಜಲವನ್ನು ಬಳಸಲು ಅನುಮತಿಸಿದೆ. ರಾತ್ರಿ ವೇಳೆಯಲ್ಲಿ ವಾಹನ ಸಂಚಾರ ನಿಯಮಗಳಿಗನುಗುಣವಾಗಿ ವಾಣಿಜ್ಯ ಉದ್ಧೇಶಿತ ವಾಹನ ಸಂಚಾರ ನಿಯಂತ್ರಿಸಿದೆ.

ಮಾಲಿನ್ಯಕ್ಕೆ ಕಾರಣವಲ್ಲದ ಸಣ್ಣ ಪ್ರಮಾಣದ ಕೈಗಾರಿಕೆಗಳು: ಮಾಲಿನ್ಯ ರಹಿತ, ಅಪಾಯ ರಹಿತ, ಸಣ್ಣ ಪ್ರಮಾಣದ ಸೇವಾ ಕೈಗಾರಿಕೆ, ಕೃಷಿ, ಪುಷ್ಪ ಕೃಷಿ, ತೋಟಗಾರಿಕೆ ಅಥವಾ ಸೂಕ್ಷ್ಮ ಪರಿಸರ ತಾಣದಿಂದ ಬುಡಕಟ್ಟು ವಸ್ತುಗಳನ್ನು ಉತ್ಪಾದಿಸುವ ಕೃಷಿ ಆಧಾರಿತ ಕೈಗಾರಿಕೆ, ಮತ್ತು ಪರಿಸರಕ್ಕೆ ಮಾರಕವಾಗದಂತಹ ಪರಿಸರ ಸ್ನೇಹಿ ಕೈಗಾರಿಕೆಗಳಿಗೆ ಅನುಮತಿಸಿದೆ.

ಸೂಕ್ಷ್ಮ ಪರಿಸರ ತಾಣದಲ್ಲಿ ಮನೋರಂಜನಾ ಉದ್ದೇಶಕ್ಕಾಗಿ ಗುರುತಿಸಲಾದ ಅರಣ್ಯ, ತೋಟಗಾರಿಕಾ ಕ್ಷೇತ್ರ, ಕೃಷಿ ಕ್ಷೇತ್ರ, ಉದ್ಯಾನವನ ಮತ್ತು ಇತರೆ ತೆರೆದ ಜಾಗಗಳನ್ನು ವಾಣಿಜ್ಯ ಅಥವಾ ಕೈಗಾರಿಕಾ ಸಂಬಂಧಿತ ಅಭಿವೃದ್ಧಿ ಚಟುವಟಿಕೆಗಳಿಗೆ ಉಪಯೋಗಿಸಬಾರದು ಅಥವಾ ಪರಿವರ್ತಿಸಬಾರದು. ವಾಣಿಜ್ಯ, ಗಣಿಗಾರಿಕೆ, ಕಲ್ಲುಕೋರೆ ಮತ್ತು ಕ್ರಷಿಂಗ್ ಘಟಕಗಳು ಸಾಮಿಲ್‌ಗಳ ನಿರ್ಮಾಣ, ಜಲ, ವಾಯು, ಮಣ್ಣು, ಶಬ್ದ ಮಾಲಿನ್ಯ ಉಂಟುಮಾಡುವ ಕಾರ್ಖಾನೆಗಳ ನಿರ್ಮಾಣ ವಾಣಿಜ್ಯ ಉದ್ದೇಶದ ಉರುವಲು ಹೊಸ ಪ್ರಧಾನ ಹೈಡ್ರೋ-ಎಲೆಕ್ಟಿಕ್ ಯೋಜನೆ ಮತ್ತು ನೀರಾವರಿ ಯೋಜನೆಗಳು ಕಂಪೆನಿಗಳು, ನಿಗಮಗಳು ಸ್ಥಾಪಿಸುವ ಬೃಹತ್ ಪ್ರಮಾಣದ ವಾಣಿಜ್ಯ ಉದ್ದೇಶಿತ ಜಾನುವಾರು ಮತ್ತು ಕೋಳಿ ಸಾಕಣೆ ಕೇಂದ್ರಗಳು ಸ್ಥಳೀಯ ರೈತರಿಂದ ಸಣ್ಣ ಪ್ರಮಾಣದಲ್ಲಿ ಕೈಗೊಳ್ಳಲು ಅನುಮತಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X